ಕೋಲಾರ, ೩೧ ಮಾರ್ಚ್ (ಹಿ.ಸ): ಆಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಏಪ್ರಿಲ್ ೫ ರಿಂದ ಎರಡು ದಿನ ಕಾಲ ನಡೆಯಲಿರುವ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಗೆ ಜಿಲ್ಲೆಯ ಜನಪ್ರತಿನಿಧಿಗಳನ್ನು ಜಿಲ್ಲಾ ನೌಕರರ ಸಂಘದಿಂದ ಭೇಟಿ ಮಾಡಿ ಆಹ್ವಾನ ನೀಡಲಾಯಿತು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸಂಸದ ಎಂ.ಮಲ್ಲೇಶ್ ಬಾಬು, ಶಾಸಕರಾದ ಕೊತ್ತೂರು ಮಂಜುನಾಥ್, ಎಸ್.ಎನ್ ನಾರಾಯಣಸ್ವಾಮಿ, ಕೆ.ವೈ ನಂಜೇಗೌಡ, ಜಿ.ಕೆ ವೆಂಕಟಶಿವಾರೆಡ್ಡಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳನ್ನು ಸೋಮವಾರ ಭೇಟಿ ಮಾಡಿ ಅಹ್ವಾನ ನೀಡಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್ ಮಾತನಾಡಿ ಜಿಲ್ಲೆಯಾದ್ಯಂತ ಇರುವ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಉದ್ಘಾಟಿಸಿ ಪೋತ್ಸಾಹಿಸಿ ನೌಕರರನ್ನು ಹುರಿದುಂಬಿಸುವಂತೆ ಮನವಿ ಮಾಡಿದರು
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಕೆ.ಎನ್ ಮಂಜುನಾಥ್ ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸರೆಡ್ಡಿ, ಜಿಲ್ಲಾ ಘಟಕದ ಕಾರ್ಯದರ್ಶಿ ಸತೀಶ್ ಕುಮಾರ್, ಖಜಾಂಚಿ ಮುರಳಿ ಮೋಹನ್, ಕಂದಾಯ ನೌಕರರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಪದಾಧಿಕಾರಿಗಳಾದ ವಿಜಯಕುಮಾರ್,ಶ್ರೀರಾಮ್, ಕೆ.ಟಿ ನಾಗರಾಜ್, ಮಾರುತಿಕುಮಾರ್ನಾಗರಾಜ್ಜ್ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್