ಬೆಂಗಳೂರು, 31 ಮಾರ್ಚ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಮುಸ್ಲಿಂ ಒಲೈಕೆ ಮತ್ತು ಬೆಲೆ ಏರಿಕೆ ವಿರುದ್ಧ ರಾಜ್ಯದಾದ್ಯಂತ ಜನಜಾಗೃತಿಗೆ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿರೋದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಡೆ ವಿರುದ್ಧ ಎರಡು ಹಂತದ ಹೋರಾಟ ನಡೆಸುತ್ತಿದ್ದೇವೆ, ಮೊದಲ ಏಪ್ರಿಲ್ 2 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ತದನಂತರ ಏಪ್ರಿಲ್ 7ರಂದು ಮಧ್ಯಾಹ್ನ 3ಕ್ಕೆ ಮೈಸೂರಿನಿಂದ ಜನಜಾಗೃತಿ ಯಾತ್ರೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಹೋರಾಟಕ್ಕೆ ಚಾಲನೆ ನೀಡಲಿದ್ದು. ಕೇಂದ್ರ ಸಚಿವರಾದ ಸೋಮಣ್ಣ, ಶೋಭಾ ಕರಂದ್ಲಾಜೆ ಅವರ ಜೊತೆ ಚರ್ಚಿಸಿದ್ದೇನೆ ಅವರು ಸಹ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa