ಲೌಂಡ್ರಿ ಉದ್ಘಾಟನೆ
ವಿಜಯಪುರ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಜನರ ಅನುಕೂಲಕ್ಕಾಗಿ ಸಿಟಿ ಮೆಡಿಕಲ್ ಸೆಂಟರ್ ಮತ್ತು ಲಾಂಡ್ರಿ ಪ್ರಾರಂಭಿಸಲಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟ
Laundry inogaration


ವಿಜಯಪುರ, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಜನರ ಅನುಕೂಲಕ್ಕಾಗಿ ಸಿಟಿ ಮೆಡಿಕಲ್ ಸೆಂಟರ್ ಮತ್ತು ಲಾಂಡ್ರಿ ಪ್ರಾರಂಭಿಸಲಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ ಹೇಳಿದ್ದಾರೆ.

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ವತಿಯಿಂದ ಪ್ರಾರಂಭಿಸಲಾಗಿರುವ ಸಿಟಿ ಮೆಡಿಕಲ್ ಸೆಂಟರ್ ಮತ್ತು ಲಾಂಡ್ರಿ ಉದ್ಘಾಟಿಸಿ ಅವರು ಮಾತನಾಡಿದರು.

ನಗರದ ಪಾಟೀಲ್ ಪ್ಲ್ಯಾನೆಟ್ ಪಕ್ಕದಲ್ಲಿ ಆರಂಭವಾಗಿರುವ ಈ ಸಿಟಿ ಮೆಡಿಕಲ್ ಸೆಂಟರ್ ನಲ್ಲಿ ಎಲ್ಲ ವೈದ್ಯಕೀಯ ಸೇವೆಗಳು ಲಭ್ಯ ಇವೆ. ಶೀಘ್ರದಲ್ಲಿ ದಂತ ವೈದ್ಯಕೀಯ ಚಿಕಿತ್ಸೆ, ಸುಸಜ್ಜಿತ ಲ್ಯಾಬ್, ಡೈಗ್ನೊಸ್ಟಿಕ್ ವ್ಯವಸ್ಥೆ, ಫಿಜಿಯೋಥೆರಪಿ ಪ್ರಾರಂಭಿಸಲಾಗುವುದು ಎಂದರು.

ಮನೆಯಲ್ಲಿರುವ ರೋಗಿಗಳಿಂದ ರಕ್ತ ಸಂಗ್ರಹಿಸಿ ತಪಾಸಣೆ ಮಾಡಿಕೊಡುವ ಹೋಮ್ ಸರ್ವಿಸ್ ಒದಗಿಸಲು ಚಿಂತನೆ ನಡೆಸಲಾಗುತ್ತಿದೆ. ಒಟ್ಟಾರೆ ಈ ಭಾಗದ ಜನರ ಅನುಕೂಲಕ್ಕಾಗಿ ಎಲ್ಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಆರ್. ಎಂ. ಹೊನ್ನುಟಗಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಟಿ. ಕಲ್ಯಾಣಪ್ಪಗೋಳ, ನೇತ್ರವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಸುನಿಲ ಬಿರಾದಾರ, ವಿಧಿವಿಜ್ಞಾನ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಉದಯಕುಮಾರ ನುಚಿ, ಶಸ್ತ್ರಚಿಕಿತ್ಸೆ ವಿಭಾಗದ ಪ್ರಾಧ್ಯಾಪಕ ಡಾ. ದಯಾನಂದ ಬಿರಾದಾರ, ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಅಶೋಕ ಥರಡಿ, ನಾನಾ ವೈದ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಪ್ರಸನ್ನ


 rajesh pande