ಎಮ್ ಎಲ್ ಸಿ ಸುನೀಲ್ ಗೌಡ ಅಧಿಕಾರಿಗಳಿಗೆ ಪತ್ರ
ವಿಜಯಪುರ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ಗ್ರಾಮೀಣ ಭಾಗದ ಅರ್ಹ ವಸತಿ ರಹಿತರ ಮತ್ತು ನಿವೇಶನ ರಹಿತರ ಸಮೀಕ್ಷೆ ನಡೆಸುವ ಅವಧಿಯನ್ನು ಇದೇ ಏಪ್ರೀಲ್ 30ರ ವರೆಗೆ ವಿಸ್ತರಿಸಲಾಗಿದು ಎಂದು ವಿಧಾನ ಪರಿಷತ್ ಸದಸ್ಯ ಸುನೀಲ್ ಗೌಡ ಪಾಟೀಲ್ ಪತ್ರ ಮೂಲಕ ಜಿಲ್ಲೆಯ ಅಧಿಕಾರಿ
Mlc address to officers do work hard


ವಿಜಯಪುರ, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ಗ್ರಾಮೀಣ ಭಾಗದ ಅರ್ಹ ವಸತಿ ರಹಿತರ ಮತ್ತು ನಿವೇಶನ ರಹಿತರ ಸಮೀಕ್ಷೆ ನಡೆಸುವ ಅವಧಿಯನ್ನು ಇದೇ ಏಪ್ರೀಲ್ 30ರ ವರೆಗೆ ವಿಸ್ತರಿಸಲಾಗಿದು ಎಂದು ವಿಧಾನ ಪರಿಷತ್ ಸದಸ್ಯ ಸುನೀಲ್ ಗೌಡ ಪಾಟೀಲ್ ಪತ್ರ ಮೂಲಕ ಜಿಲ್ಲೆಯ ಅಧಿಕಾರಿಗಳಿಗೆ ತಿಳಿಸಿದರು.

ಈ ನಿಟ್ಟಿನಲ್ಲಿ ಕೂಡಲೇ ಕಾರ್ಯೋನ್ಮುಖರಾಗುವಂತೆ ಶಾಸಕ ಸುನೀಲಗೌಡ ಪಾಟೀಲ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿಗಳು, ಎಲ್ಲ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಭಾಗದ ಅರ್ಹ ವಸತಿ ರಹಿತರ ಮತ್ತು ನಿವೇಶನ ರಹಿತರ ಸಮೀಕ್ಷೆ ನಡೆಸುವ 31.03.2025 ನಿಗದಿ ಪಡಿಸಲಾಗಿತ್ತು. ಆದರೆ, ಶೇಕಡಾ 100 ರಷ್ಟು ಅರ್ಹ ಫಲಾನುಭವಿಗಳ ಸಮೀಕ್ಷೆ ನಡೆಸಲು ರಾಜೀವ ಗಾಂಧಿ ವಸತಿ ನಿಗಮ ಸಮೀಕ್ಷೆ ಅವಧಿಯನ್ನು 30.04.2025ರ ವರೆಗೆ ವಿಸ್ತರಿಸಿದೆ.

ಹೀಗಾಗಿ ಜಿ.ಪಂ, ತಾ.ಪಂ ಅಧಿಕಾರಿಗಳು ಹಾಗೂ ಪಿ.ಡಿ.ಓ ರವರು ಈ ಅವಧಿಯಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಿ ವಸತಿ ಮತ್ತು ನಿವೇಶನ ರಹಿತರಿಗೆ ಅನುಕೂಲ ಮಾಡಿ ಕೋಡಬೇಕು ಎಂದು ಶಾಸಕರು ಪತ್ರದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಪ್ರಸನ್ನ


 rajesh pande