ಭೋಪಾಲ್, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಎತ್ತಿರುವ ಪ್ರಶ್ನೆಗಳಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ತಿರುಗೇಟು ನೀಡಿದ್ದಾರೆ.
ಸೋನಿಯಾ ಗಾಂಧಿಯವರ ಅಭಿಪ್ರಾಯಗಳು ಅವರ ಸೀಮಿತ ಜ್ಞಾನದ ಪರಿಣಾಮ ಎಂದು ಅವರು ಟೀಕಿಸಿದ್ದಾರೆ.
ಕೇಂದ್ರ ಸರ್ಕಾರದ ಶಿಕ್ಷಣ ನೀತಿಯು ಕೇಂದ್ರೀಕರಣ, ವಾಣಿಜ್ಯೀಕರಣ ಹಾಗೂ ಕೋಮುವಾದವನ್ನು ಉತ್ತೇಜಿಸುತ್ತಿದೆ ಎಂಬ ಸೋನಿಯಾ ಗಾಂಧಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಡಾ. ಯಾದವ್, ಈ ನೀತಿ ದೇಶದ ಸ್ವಾವಲಂಬನೆ ಮತ್ತು ಸಾಂಸ್ಕೃತಿಕ ಮೌಲ್ಯಗಳ ರಕ್ಷಣೆಗೆ ಬೇಕಾಗಿದೆ ಎಂದರು.
ಕಾಂಗ್ರೆಸ್ ಆಳ್ವಿಕೆಯ ಶಿಕ್ಷಣ ನೀತಿ ಲಾರ್ಡ್ ಮೆಕಾಲೆಯ ಧೋರಣೆಯನ್ನು ಮುಂದುವರಿಸಿತು ಮತ್ತು ಭಾರತೀಯ ಪರಂಪರೆಯನ್ನು ಕಳಚಿತು ಎಂದು ಆರೋಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಾರಿಗೆ ತಂದ 2020ರ ಹೊಸ ಶಿಕ್ಷಣ ನೀತಿಯನ್ನು ಮಧ್ಯಪ್ರದೇಶ ಮೊದಲಿನಿಂದಲೇ ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದರು.
ಸೋನಿಯಾ ಗಾಂಧಿಯವರು ಈ ವಿಷಯದಲ್ಲಿ ತಪ್ಪು ಮಾಹಿತಿಯನ್ನು ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ದೇಶದ ನಾಗರಿಕರು ತಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡಬೇಕು ಹಾಗೂ ಶಕ್ತಿಶಾಲಿ ಭವಿಷ್ಯಕ್ಕಾಗಿ ಈ ಶಿಕ್ಷಣ ನೀತಿಯನ್ನು ಸ್ವೀಕರಿಸಬೇಕು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa