ನವದೆಹಲಿ, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ದೇಶದಲ್ಲಿ ಎಡಪಂಥೀಯ ಉಗ್ರವಾದದ ವಿರುದ್ಧ ಕೇಂದ್ರ ಸರ್ಕಾರದ ನಿರಂತರ ಕಾರ್ಯಾಚರಣೆ ಪರಿಣಾಮ ನೀಡಿದ್ದು, ನಕ್ಸಲ್ ಪ್ರಭಾವಿತ ಜಿಲ್ಲೆಗಳ ಸಂಖ್ಯೆ 12ರಿಂದ 6ಕ್ಕೆ ಇಳಿದಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ನಕ್ಸಲ್ ಮುಕ್ತ ಭಾರತ ನಿರ್ಮಾಣದ ದಿಸೆಯಲ್ಲಿ ಇದು ಮಹತ್ವದ ಹೆಜ್ಜೆ. ಮೋದಿ ಸರ್ಕಾರವು ನಕ್ಸಲ್ ವಾದ ನಿರ್ಮೂಲನೆಗೆ ನಿರ್ದಯ ಧೋರಣೆಯನ್ನು ಅನುಸರಿಸುತ್ತಿದ್ದು, 2026ರ ಮಾರ್ಚ್ 31ರೊಳಗೆ ನಕ್ಸಲಿಸಂ ನಾಶಗೊಳಿಸಲು ನಿಶ್ಚಯಿಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa