ಗುಜರಾತ ಪಟಾಕಿ ಕಾರ್ಖಾನೆ ದುರಂತ : ಪ್ರಧಾನಿ ಸಂತಾಪ
ನವದೆಹಲಿ, 1 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗುಜರಾತ್‌ನ ಬನಸ್ಕಾಂತದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ೧೧ ಜನ ಮೃತಪಟ್ಟ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಜೀವಹಾ
Pm


ನವದೆಹಲಿ, 1 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗುಜರಾತ್‌ನ ಬನಸ್ಕಾಂತದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ೧೧ ಜನ ಮೃತಪಟ್ಟ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಜೀವಹಾನಿಯಾಗಿರುವುದಕ್ಕೆ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ತಿಳಿಸಿದ್ದಾರೆ. ಮೃತರ ಸಂಬಂಧಿಕರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಪ್ರಧಾನಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande