ಬೆಂಗಳೂರು, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ತುಮಕೂರು ಸಿದ್ದಗಂಗಾ ಮಠದಲ್ಲಿ ಇಂದು ನಡೆಯಲಿರುವ ಶ್ರೀ ಶಿವಕುಮಾರ ಸ್ವಾಮೀಜಿಯವರ 118 ನೇ ಜನ್ಮ ದಿನಾಚರಣೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ರಾಜನಾಥ್ ಸಿಂಗ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ, ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ, ಗೃಹ ಸಚಿವ ಡಾ ಜಿ ಪರಮೇಶ್ವರ ಮತ್ತು ಸಹಕಾರ ಸಚಿವ ಕೆ ಎನ್ ರಾಜಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇತ್ತೀಚೆಗೆ ಸದ್ಗುರು ಜಗ್ಗಿ ವಾಸುದೇವ್ ಅವರ ಆಹ್ವಾನದ ಮೇರೆಗೆ ಕೊಯಮತ್ತೂರಿನಲ್ಲಿ ನಡೆದ ಮಹಾಶಿವರಾತ್ರಿ ಆಚರಣೆಯ ಸಂದರ್ಭದಲ್ಲಿ ಶಿವಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa