ಜಮ್ಮು, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ರಾಮಕೋಟ್ ಪಟ್ಟಿಯಲ್ಲಿ ಸೋಮವಾರ ರಾತ್ರಿ ಶೋಧ ಕಾರ್ಯಾಚರಣೆಯ ವೇಳೆ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ನಂತರ ಮೂವರು ಉಗ್ರರು ಕಾಡಿನಲ್ಲಿ ಅಡಗಿದ್ದು, ಅವರನ್ನು ಹಿಡಿಯಲು ಕಾರ್ಯಾಚರಣೆ ಮುಂದುವರಿದಿದೆ.
ಸ್ನಿಫರ್ ಶ್ವಾನಗಳು ಮತ್ತು ವೈಮಾನಿಕ ಕಣ್ಗಾವಲಿನ ಸಹಾಯದಿಂದ ಶೋಧಕಾರ್ಯ ತೀವ್ರಗೊಳಿಸಲಾಗಿದೆ. ಭಾನುವಾರ ರಾತ್ರಿ ಊರಿನಲ್ಲಿನ ಮನೆಯೊಂದರಲ್ಲಿ ಅನುಮಾನಾಸ್ಪದ ಚಲನವಲನಗಳ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಆರು ಜನರನ್ನು ಬಂಧಿಸಿವೆ.
ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಬಂಧಿತರನ್ನು ವಿಚಾರಣೆ ನಡೆಸಲಾಗುತ್ತಿದೆ. ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa