ಯತ್ನಾಳ್ ಉಚ್ಛಾಟನೆ : ಬಿಜೆಪಿ ಜಿಲ್ಲಾಧ್ಯಕ್ಷ ಅಂಗಡಿ ಸಮರ್ಥನೆ
ವಿಜಯಪುರ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಉಚ್ಚಾಟನೆಯಿಂದ ನನಗೆ ವೈಯಕ್ತಿಕವಾಗಿ ತುಂಬಾ ನೋವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು. ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಂಗಡಿ, ಶಾಸಕ ಯತ್ನಾಳ ಬಿಜೆಪ
Yatnal suspended-president clarify


ವಿಜಯಪುರ, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಉಚ್ಚಾಟನೆಯಿಂದ ನನಗೆ ವೈಯಕ್ತಿಕವಾಗಿ ತುಂಬಾ ನೋವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು.

ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಂಗಡಿ, ಶಾಸಕ ಯತ್ನಾಳ ಬಿಜೆಪಿ ಕುಟುಂಬ ಸದಸ್ಯರು ಅವರ ಉಚ್ಚಾಟನೆಯಿಂದ ನೋವಾಗಿದೆ ಎಂದರು.

ಇದರಲ್ಲಿ ಯತ್ನಾಳ ಅವರ ತಪ್ಪು ಕೂಡ ಇದೆ. ಬಿಜೆಪಿ ಪಕ್ಷದ ನಾಯಕರ ಬಗ್ಗೆ ರಸ್ತೆಯಲ್ಲಿ ನಿಂತು ಮಾತನಾಡುವುದು ಪಕ್ಷಕ್ಕೆ ಮುಜುಗರ ತರುತ್ತಿತ್ತು. ಇದನ್ನು ಅರಿತು ಬಿಜೆಪಿ ಹೈಕಮಾಂಡ್ ಅವರನ್ನು ಉಚ್ಚಾಟನೆ ಮಾಡಿದ್ದಾರೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / ಪ್ರಸನ್ನ


 rajesh pande