ಬೆಂಗಳೂರು, 1 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೆಲೆ ಏರಿಕೆ ವಿರುದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಜೀರ್ಣ ಆಗುವಷ್ಟು ಬಹುಮತವನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟಾಗ ತುಘಲಕ್ ದರ್ಬಾರ್ ನಡೆಸಿ ಸಾಮಾನ್ಯ ಜನ ಜೀವಿಸಲು ಸಾಧ್ಯವಿಲ್ಲದಂತಹ ಸ್ಥಿತಿ ನಿರ್ಮಾಣ ಮಾಡಿದ್ದು ಸಿದ್ದರಾಮಯ್ಯ ಸರ್ಕಾರದ ಸಾಧನೆ ಎಂದು ವಾಗ್ದಾಳಿ ನಡೆಸಿದರು.
ಮುಸಲ್ಮಾನರಿಗೆ 4% ಮೀಸಲಾತಿ ಕೊಟ್ಟಿದ್ದಾರೆ, ಉಳಿದ ಹಿಂದೂಗಳು ಏನು ದ್ರೋಹ ಮಾಡಿದ್ದಾರೆ? ನಾವು ಮುಸ್ಲಿಮರ ವಿರೋಧಿಗಳಲ್ಲ, ಆದರೆ ಎಲ್ಲರನ್ನೂ ಸರಿ ಸಮನಾಗಿ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ ಎಂದರು.
ಹಾಲು, ವಿದ್ಯುತ್, ಮೆಟ್ರೋ, ನೋಂದಣಿ ವೆಚ್ಚ ಸೇರಿ ಎಲ್ಲಾ ದರ ಏರಿಕೆ ಮಾಡಿದ್ದಾರೆ. ದಿನಬಳಕೆಯ ವಸ್ತುಗಳನ್ನು ಕಾಂಗ್ರೆಸ್ ಸರ್ಕಾರ ಏರಿಕೆ ಮಾಡಿ ಜನರನ್ನು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ. ಬೆಲೆ ಏರಿಕೆ ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ಬಿಜೆಪಿ ಘಟಕ ನಾಳೆ ನಡೆಸುತ್ತಿರುವ ಅಹೋ ರಾತ್ರಿ ಧರಣಿಯಲ್ಲಿ ತಾವೂ ಭಾಗವಹಿಸುವುದಾಗಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa