ವಿಜಯಪುರ, 13 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೆಲೆ ಏರಿಕೆ ವಿರುದ್ಧ ಬಿಜೆಪಿಯವರು ನಡೆಸುತ್ತಿರುವ ಹೋರಾಟ ಸಮಂಜಸವಾಗಿದೆ. ಆದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಲೇವಡಿ ಮಾಡಿದರು.
ವಿಜಯಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಎಂ. ಬಿ. ಪಾಟೀಲ್, ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಲೇ ಬಂದಿದೆ. ಸಿಲಿಂಡರ್ ದರ ಹೆಚ್ಚಳ ಮಾಡಿದರು. ಇದೀಗ ಪೆಟ್ರೊಲ್ ಬೆಲೆ ಮತ್ತೆ 50 ರೂಪಾಯಿ ಹೆಚ್ಚಿಸಿದ್ದಾರೆ. ಅದ್ಯಾವುದು ಬಿಜೆಪಿ ಅವರ ಕಣ್ಣಿಗೆ ಕಾಣಿಸುತ್ತಿಲ್ಲವಾ ಎಂದು ಕಿಡಿ ಕಾರಿದರು.
ರಾಜ್ಯದಲ್ಲಿ ಬಿಜೆಪಿ ಅವರು ನಡೆಸುತ್ತಿರುವ ಪ್ರತಿಭಟನೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅಲ್ಲ, ಮೋದಿ ವಿರುದ್ಧ ಮಾಡಲಿ ಎಂದು ಸಲಹೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande