ಕೋಲಾರ, ೧೪ ಏಪ್ರಿಲ್ (ಹಿ.ಸ) :
ಆ್ಯಂಕರ್ : ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ ೧೩೪ನೇ ಜನ್ಮದಿನಾಚರಣೆಯನ್ನು ಕೆಜಿಎಫ್‌ನ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸೋಮವಾರದಂದು ಆಚರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾAತರಾಜು ಅವರು ಡಾ. ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಮಾಜದ ಅತ್ಯಂತ ಹಿಂದುಳಿದ ದಲಿತ ಹಾಗೂ ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ಕಲ್ಪಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶ, ತತ್ವಗಳು, ಸರ್ವಕಾಲಿಕವಾಗಿದ್ದು, ಅವರ ಮಾರ್ಗದರ್ಶನವನ್ನು ಅಳವಡಿಸಿಕೊಂಡು ಮುನ್ನಡೆಯುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಎಸ್. ಪಾಂಡುರ0ಗ, ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ಜಿಲ್ಲೆಯ ಎಲ್ಲಾ ಪೊಲೀಸ್ ಇನ್ಸ್ಪೆಕ್ಟರ್‌ಗಳು, ಪಿಎಸ್‌ಐಗಳು ಮತ್ತು ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ ಹಾಗೂ ಲಿಪಿಕ ಸಿಬ್ಬಂದಿ ಭಾಗವಹಿಸಿದ್ದರು.
ಚಿತ್ರ : ಕೆಜಿಎಫ್ ಎಸ್.ಪಿ. ಕಛೇರಿಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಎಸ್‌ಪಿ ಕೆ.ಎಂ.ಶಾAತರಾಜು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್