ವಿಜಯಪುರ, 16 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪಕ್ಷ ಕರೆ ನೀಡಿರುವ ಜನಾಂದೋಲನ ಸಮಾವೇಶಕ್ಕೆ ವಿಜಯಪುರ ಜಿಲ್ಲೆ ಸಜ್ಜಾಗಿದೆ.
ರಾಜ್ಯ ಸರ್ಕಾರದ ವಿರುದ್ದ ನಡೆಯುವ ಜನಾಕ್ರೋಶ ಯಾತ್ರೆಗೆ ವಿಜಯಪುರ ಜಿಲ್ಲೆಗೆ ಆಗಮಿಸಲಿರುವ ಮುಖಂಡರ ಸ್ವಾಗತ ಕಟೌಟ್, ಬ್ಯಾನರ್ ಗಳು ನಗರದೆಲ್ಲೆಡೆ ರಾರಾಜಿಸುತ್ತಿವೆ.
ನಾಳೆ ಮಧ್ಯಾಹ್ನ ನಡೆಯಲಿರುವ ಸಮಾವೇಶಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಮುರಗೇಶ ನಿರಾಣಿ, ಭಾಗವಹಿಸಲಿದ್ದಾರೆ.
ಸಮಾವೇಶದಲ್ಲಿ ರಾಜ್ಯ ನಾಯಕರಿಗೆ ಜಿಲ್ಲೆಯ ಎ. ಎಸ್. ಪಾಟೀಲ್ ನಡಹಳ್ಳಿ, ಅಪ್ಪು ಪಟ್ಟಣಶೆಟ್ಟಿ, ವಿಜುಗೌಡ ಪಾಟೀಲ್, ಜಿಲ್ಲಾ ಅಧ್ಯಕ್ಷರು ಪದಾಧಿಕಾರಿಗಳು ಕಾರ್ಯಕರ್ತರು ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.
ಸಮಾವೇಶಕ್ಕೆ ಮುನ್ನ ಬೃಹತ್ ಮೆರವಣಿಗೆ ನಡೆಯಲಿದ್ದು, ನಾಳೆ ಮಧ್ಯಾಹ್ನ 3 ಘಂಟೆಗೆ ನಗರದ ಶಿವಾಜಿ ವೃತ್ತದಿಂದ ನಗರದ ಪ್ರಮುಖ ವೃತ್ತದ ಮೂಲಕ ದರ್ಬಾರ್ ಹೈಸ್ಕೂಲ್ ಮೈದಾನಕ್ಕೆ ಕೊನೆಗೊಳ್ಳಲಿದೆ.
ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ವೇದಿಕೆಯಲ್ಲಿ ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande