ನ್ಯಾಯ ನೀಡುವಲ್ಲಿ ಕರ್ನಾಟಕಕ್ಕೆ ದೇಶದಲ್ಲಿ ಮೊದಲ‌ ಸ್ಥಾನ
ಬೆಂಗಳೂರು, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕವು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಟಾಟಾ ಟ್ರಸ್ಟ್‌ ವರದಿ ನೀಡಿದೆ ಎಂದು‌ ರಾಜ್ಯ ವಾರ್ತಾ ಮತ್ತು ಪ್ರಚಾರ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಪೊಲೀಸ್‌ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು
Number 1


ಬೆಂಗಳೂರು, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕವು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಟಾಟಾ ಟ್ರಸ್ಟ್‌ ವರದಿ ನೀಡಿದೆ ಎಂದು‌ ರಾಜ್ಯ ವಾರ್ತಾ ಮತ್ತು ಪ್ರಚಾರ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪೊಲೀಸ್‌ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ದೇಶದ 18 ದೊಡ್ಡ ಮತ್ತು ಮಧ್ಯಮ ಗಾತ್ರದ ರಾಜ್ಯಗಳ ಪೈಕಿ ಕರ್ನಾಟಕ ಅಗ್ರಸ್ಥಾನದಲ್ಲಿದೆ.

ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚಿ, ಸಾಕ್ಷ್ಯ ಸಂಗ್ರಹಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವವರೆಗೆ ಪೊಲೀಸ್‌ ಇಲಾಖೆಯು ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಎಲ್ಲಾ ಕಾರ್ಯಗಳನ್ನು ದೇಶದ ಎಲ್ಲಾ ರಾಜ್ಯಗಳಿಗಿಂತ ಬಹಳ ಯಶಸ್ವಿಯಾಗಿ ನಮ್ಮ ಕರ್ನಾಟಕ ಪೊಲೀಸ್‌ ಇಲಾಖೆಯು ಮಾಡುತ್ತಿರುವುದು ಅತ್ಯಂತ ಪ್ರಶಂಸನೀಯ ಮತ್ತು ಶ್ಲಾಘನೀಯ.

ಅಂತೆಯೇ, ನಾಗರಿಕರ ರಕ್ಷಣೆಗೆ ಹಗಲಿರುಳೆನ್ನದೆ ಶ್ರಮಿಸುತ್ತಿರುವ ಪೊಲೀಸ್‌ ಇಲಾಖೆ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಎಲ್ಲಾ ರೀತಿಯ ನೆರವು ನೀಡಲು ಸರ್ಕಾರವು ಬದ್ಧವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande