ಬೆಂಗಳೂರು, 16 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯದ ಪ್ರಮುಖ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಕೆ-ರೈಡ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಎಂ.ಬಿ. ಪಾಟೀಲ , ವಿಜಯಪುರ-ಬೆಂಗಳೂರು ರೈಲ್ವೆ ಪ್ರಯಾಣವನ್ನು 10 ಗಂಟೆಗೆ ಕಡಿಮೆ ಮಾಡುವಂತೆ ಸೂಚನೆ ನೀಡಿದರು.
ಪ್ರಸ್ತುತ ಈ ಮಾರ್ಗದ ಪ್ರಯಾಣಕ್ಕೆ 14-16 ಗಂಟೆಗಳ ಸಮಯ ಬೇಕಾಗುತ್ತಿದೆ. ಗದಗ-ವಿಜಯಪುರ ಜೋಡಿ ಮಾರ್ಗ, ಬಾಗಲಕೋಟೆ-ಕುಡಚಿ, ಧಾರವಾಡ-ಕಿತ್ತೂರು-ಬೆಳಗಾವಿ ಮಾರ್ಗಗಳ ಕಾರ್ಯಪ್ರಗತಿ, ಹಾಗೂ ಹುಬ್ಬಳ್ಳಿ-ಅಂಕೋಲಾ ಮಾರ್ಗದ ಮರು ಸಮೀಕ್ಷೆ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಯಿತು.
ರೈಲ್ವೆ ವಿದ್ಯುದ್ದೀಕರಣ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ವಂದೇ ಭಾರತ್ ಸಂಚಾರಕ್ಕೆ ಸಿದ್ಧತೆ ಮಾಡಿಕೊಳ್ಳುವ ಸಲಹೆ ನೀಡಲಾಯಿತು. ಜಿಲ್ಲಾ ಮಟ್ಟದಲ್ಲಿ ಭೂಸ್ವಾಧೀನ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಸಭೆಯಲ್ಲಿ ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕಿ ಡಾ. ಎನ್. ಮಂಜುಳಾ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa