ಕಲ್ಬುರ್ಗಿ, 16 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಜೀವನ ನಡೆಯಲು ಉದ್ಯೋಗ ಬೇಕು ನಿಜ. ಆದರೆ ಉದ್ಯೋಗ ಮಾಡುವುದಕ್ಕಿಂತ ನೀವೇ ಹತ್ತಾರು ಜನರಿಗೆ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯುವತ್ತ ಗಮನಹರಿಸಬೇಕು ಎಂದು ಯುವ ಜನತೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕರೆ ನೀಡಿದರು.
ಕಲಬುರಗಿಯಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಭಾಗದ ವಿಭಾಗಿಯ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವಿ ಹತ್ತಾರು ಜನರಿಗೆ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ. ಉದ್ಯೋಗ ಸಿಗಲಿಲ್ಲ ಎಂದು ಎಂದಿಗೂ ಎದೆಗುಂದಬಾರದು. ಜೀವನದಲ್ಲಿ ಒಂದಲ್ಲಾ ಒಂದು ಅವಕಾಶ ಸಿಕ್ಕೇ ಸಿಗುತ್ತದೆ. ಸಿಕ್ಕ ಅವಕಾಶ ಸರಿಯಾಗಿ ಬಳಸಿಕೊಳ್ಳಬೇಕು. ಕೌಶಲ್ಯ ಆಧಾರಿತ ಉದ್ಯೋಗ ಮಾಡಿದರೆ ಉತ್ತಮ ಜೀವನ ಸಾಗಿಸಬಹುದು. ಯಾವುದೇ ಕೆಲಸ ಮಾಡಿದರು ನಮಗೆ ಆತ್ಮಗೌರವ ಇರಬೇಕು.
ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಎಲ್ಲಾ ವರ್ಗದ ರಕ್ಷಣೆ ಮಾಡಲು ಕಾರ್ಯಕ್ರಮ ರೂಪಿಸಿಕೊಂಡು ಬಂದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳಿಗೆ ರಕ್ಷಣೆ ಸಿಗುತ್ತದೆ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ. ನಮ್ಮ ಸರ್ಕಾರದ ಮೇಲೆ ನಿಮ್ಮ ಆಶೀರ್ವಾದವಿರಲಿ. ಕಲ್ಯಾಣ ಕರ್ನಾಟಕದ ಜನರಿಗೆ ನನ್ನ ಕೋಟಿ ನಮನ ಎಂದರು.
ಹಿಂದೂಸ್ತಾನ್ ಸಮಾಚಾರ್ / Samarth biral