ಬೆಂಗಳೂರು, 16 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮೂರು ಬಿಟ್ಟ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ ಈಗ ಕೆಪಿಎಸ್ಸಿ ಪ್ರಶ್ನೆಪತ್ರಿಕೆಯಲ್ಲಿ ಭಾಷಾಂತರ ದೋಷವೇ ಇಲ್ಲ ಎನ್ನುವ ಮೂಲಕ ಮತ್ತೊಮ್ಮೆ ಭಂಡತನ ಮೆರೆದಿದೆ ಎಂದು ಪ್ರತಿಪಕ್ಷದ ನಾಯಕ ಆರ್ ಅಶೋಕ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಅಭ್ಯರ್ಥಿಗಳು, ತಜ್ಞರು, ಸಾಹಿತಿಗಳು, ಕನ್ನಡಪರ ಹೋರಾಟಗಾರರ ಮನವಿಗೆ ಕೊಂಚವೂ ಕಿಮ್ಮತ್ತಿಲ್ಲವೇ? ಕನ್ನಡ ಮಾಧ್ಯಮದಲ್ಲಿ ಓದಿರುವ ಗ್ರಾಮೀಣ ಭಾಗದ ಆಕಾಂಕ್ಷಿಗಳ ಅಳಲಿಗೆ ಬೆಲೆಯೇ ಇಲ್ಲವೇ? ಪದೇ ಪದೇ ಕನ್ನಡಿಗರಿಗೆ ಮೋಸ ಮಾಡುತ್ತಿರುವ ನಾಡಡ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ನಮ್ಮ ಧಿಕ್ಕಾರ! ಎಂದು ಬರೆದುಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa