11 May 2025, 10:11 HRS IST

ಸಮಾಜ ಕಲ್ಯಾಣ ಇಲಾಖೆ: ಅರ್ಜಿ ಆಹ್ವಾನ
ಬಳ್ಳಾರಿ, 17 ಏಪ್ರಿಲ್ (ಹಿ.ಸ.) ಆ್ಯಂಕರ್: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶಾತಿ ಕಲ್ಪಿಸಲು ಆನ್ ಲೈನ
ಸಮಾಜ ಕಲ್ಯಾಣ ಇಲಾಖೆ: ಅರ್ಜಿ ಆಹ್ವಾನ


ಬಳ್ಳಾರಿ, 17 ಏಪ್ರಿಲ್ (ಹಿ.ಸ.)

ಆ್ಯಂಕರ್: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶಾತಿ ಕಲ್ಪಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಆದರೆ ಆನ್ ಲೈನ್ ಲಿಂಕ್ https://swd.karnataka.gov.in ನಲ್ಲಿ ಅರ್ಜಿ ಸಲ್ಲಿಸಲು ಸರ್ವೀಸ್ ಲಭ್ಯವಿಲ್ಲ ಎಂದು ತೋರಿಸುತ್ತಿರುವ ಕಾರಣ ಅರ್ಜಿಗಳನ್ನು ಆಫ್ ಲೈನ್ ಮೂಲಕ ಸಲ್ಲಿಸಬಹುದು.

ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಸಂಬಂಧಿಸಿದ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಗಳಿಂದ ಪಡೆದು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಮೇ 03 ರೊಳಗೆ ಸಲ್ಲಿಸಬೇಕು.

ಮೇ 09 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9480843023 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande