ಮುಂದುವರೆದ ಭಯೋತ್ಪಾದಕರ ಶೋಧ ಕಾರ್ಯಾಚರಣೆ
ಪೂಂಚ್, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಲಸಾನಾ ಅರಣ್ಯ ಪ್ರದೇಶದಲ್ಲಿ ಅಡಗಿರುವ ಭಯೋತ್ಪಾದಕರ ಪತ್ತೆಗೆ ಭಾರತೀಯ ಸೇನೆಯ ರೋಮಿಯೋ ಪಡೆ ಹಾಗೂ ವಿಶೇಷ ಕಾರ್ಯಾಚರಣೆ ಗುಂಪು ಶೋಧ ಕಾರ್ಯಾಚರಣೆಯನ್ನು ನಿರಂತರವಾಗಿ ಮುಂದುವರೆಸಿದೆ. ಭದ್ರತಾ ಅಧಿಕಾರಿಗಳ ಪ್ರಕಾರ,
Search operation


ಪೂಂಚ್, 18 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಲಸಾನಾ ಅರಣ್ಯ ಪ್ರದೇಶದಲ್ಲಿ ಅಡಗಿರುವ ಭಯೋತ್ಪಾದಕರ ಪತ್ತೆಗೆ ಭಾರತೀಯ ಸೇನೆಯ ರೋಮಿಯೋ ಪಡೆ ಹಾಗೂ ವಿಶೇಷ ಕಾರ್ಯಾಚರಣೆ ಗುಂಪು ಶೋಧ ಕಾರ್ಯಾಚರಣೆಯನ್ನು ನಿರಂತರವಾಗಿ ಮುಂದುವರೆಸಿದೆ.

ಭದ್ರತಾ ಅಧಿಕಾರಿಗಳ ಪ್ರಕಾರ, ಭಾನುವಾರ ಸಂಜೆ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಆ ನಂತರದಿಂದ ಕಾರ್ಯಾಚರಣೆ ಸತತವಾಗಿ ನಡೆಯುತ್ತಿದೆ. ದಟ್ಟ ಅರಣ್ಯದಲ್ಲಿ ಭಯೋತ್ಪಾದಕರ ಶೋಧಕ್ಕಾಗಿ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ತೀವ್ರಗೊಳಿಸಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande