ಬಳ್ಳಾರಿ, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಆಡಳಿತಾತ್ಮಕ ವೈಫಲ್ಯಗಳು, ಭ್ರಷ್ಟಾಚಾರ ಆರೋಪಗಳು, ಹಗರಣಗಳು ಮತ್ತು ಬೆಲೆ ಏರಿಕೆ ವಿರೋಧಿ ಬಿಜೆಪಿ ರಾಜ್ಯಾದ್ಯಂತ ನಡೆಸುತ್ತಿರುವ `ಜಾನಾಕ್ರೋಶ' ಯಾತ್ರೆಯ ಮೂರನೇ ಹಂತ ಏಪ್ರಿಲ್ 24ರ ಗುರುವಾರ ಬಳ್ಳಾರಿಯಲ್ಲಿ ನಡೆಯಲಿದೆ.
ಈ ಕುರಿತು ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು ಮೋಕ ಅವರು ಜಿಲ್ಲಾ ಕಚೇರಿಯಲ್ಲಿ ಸುದ್ದಿಗಾರರಿಗೆ ಶನಿವಾರ ಈ ಮಾಹಿತಿ ನೀಡಿದ್ದು, ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಜನಾಕ್ರೋಶ ಯಾತ್ರೆಯ ಸಂಚಾಲಕರಾಗಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಹಾಗೂ ಸ್ಥಳೀಯ ಮುಖಂಡರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಶ್ರೀ ಕನಕದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ರ್ಯಾಲಿ ಗುರುವಾರ ಬೆಳಗ್ಗೆ 10 ಗಂಟೆಗೆ ಸಮಾವೇಶಗೊಳ್ಳಲಿದೆ.
ಗಡಿಗೆ ಚನ್ನಪ್ಪ ವೃತ್ತದಲ್ಲಿ ಬೃಹತ್ ಸಭೆ ನಡೆಯಲಿದೆ. ಕರ್ನಾಟಕದ ಕಾಂಗ್ರೆಸ ಸರ್ಕಾರದ ವಿರುದ್ಧ ಮತ್ತು ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಡುವ ಎಲ್ಲರಿಗೂ - ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ ಎಂದರು.
ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಎಚ್. ಹನುಮಂತಪ್ಪ, ನಿರ್ದೇಶಕ ವೀರಶೇಖರರೆಡ್ಡಿ, ಕಾರ್ಪೊರೇಟರ್ ಅಶೋಕ್ ಇನ್ನಿತರರು ಈ ಸಂದರ್ಭದಲ್ಲಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್