ಕುಡಾ ಸದಸ್ಯರಿಂದ ಶಾಸಕರ ಭೇಟಿ ಅಭಿವೃದ್ಧಿ ಬಗ್ಗೆ ಚರ್ಚೆ
ಕುಡಾ ಸದಸ್ಯರಿಂದ ಶಾಸಕರ ಭೇಟಿ ಅಭಿವೃದ್ಧಿ ಬಗ್ಗೆ ಚರ್ಚೆ,
ಚಿತ್ರ: ಕೋಲಾರ ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯರು ಶಾಸಕ ಕೊತ್ತೂರು ಮಂಜುನಾಥ್ ಅವರನ್ನು ಭೇಟಿ ಯಾಗಿ ಕೃತಜ್ಞತೆ ಸಲ್ಲಿಸಿದರು.


ಕುಡಾ ಸದಸ್ಯರಿಂದ ಶಾಸಕರ ಭೇಟಿ ಅಭಿವೃದ್ಧಿ ಬಗ್ಗೆ ಚರ್ಚೆ,

ಕೋಲಾರ, ೧೯ ಏಪ್ರಿಲ್(ಹಿ.ಸ) :

ಆ್ಯಂಕರ್ : ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನವಾಗಿ ಆಯ್ಕೆಯಾದ ನಾಲ್ಕು ನಿರ್ದೇಶಕರು ಶನಿವಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಕೋಲಾರ ನಗರವು ಅಭಿವೃದ್ಧಿಯಿಂದ ವಂಚಿತವಾಗದಂತೆ ಕ್ರಮ ವಹಿಸಬೇಕು ಹೊಸ ಬಡಾವಣೆ ನಿರ್ಮಾಣ ಮಾಡಿ ನಿವೇಶನ ರಹಿತರಿಗೆ ನಿವೇಶನಗಳನ್ನು ಕೊಡುವ ಕೆಲಸವಾಗಬೇಕು, ರಸ್ತೆಗಳ ಬಗ್ಗೆ ಹರಿಸಬೇಕು ಜನಸಂಖ್ಯೆಗೆ ಅನುಗುಣವಾಗಿ ಮೂಲಭೂತ ಸೌಕರ್ಯಗಳನ್ನು ನೀಡುವ ಕೆಲಸವನ್ನು ನೂತನ ಸಮಿತಿಯ ಜವಾಬ್ದಾರಿಯಾಗಬೇಕು ಸರ್ಕಾರ ಮತ್ತು ಜನಪ್ರತಿನಿಧಿಗಳ ಮಾರ್ಗದರ್ಶನ ಸದಾ ಇದ್ದು ಮಾದರಿ ನಗರವಾಗಿ ಮಾಡುವಂತೆ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್, ಸದಸ್ಯರಾದ ಕೋಟೆ ಬಿ.ಟಿ ಚಂದ್ರಶೇಖರ್, ಕಿಲಾರಿಪೇಟೆ ಮಣಿ, ಗಾಂಧಿನಗರ ಅನಿಲ್ ಕುಮಾರ್, ವಕ್ಕಲೇರಿ ಜ್ಯೋತಿ ಮುನಿಯಪ್ಪ ಸೇರಿದಂತೆ ಕೃಷಿಕ ಸಮಾಜದ ಜಿಲ್ಲಾ ಅಧ್ಯಕ್ಷ ಡಿ.ಎಲ್ ನಾಗರಾಜ್, ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮುಂತಾದವರು ಇದ್ದರು.

ಚಿತ್ರ: ಕೋಲಾರ ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯರು ಶಾಸಕ ಕೊತ್ತೂರು ಮಂಜುನಾಥ್ ಅವರನ್ನು ಭೇಟಿ ಯಾಗಿ ಕೃತಜ್ಞತೆ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande