ಬೆಂಗಳೂರು, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೇಸಿಗೆ ಸಮಯದಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಗಗನಕ್ಕೇರುತ್ತಿರುವ ಟ್ಯಾಂಕರ್ ದರಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ವತಿಯಿಂದ 'ಸಂಚಾರಿ ಕಾವೇರಿ' ಎಂಬ ವಿನೂತನವಾದ ಯೋಜನೆಯನ್ನು ಪರಿಚಯಿಸುತ್ತಿದ್ದೇವೆ. ಈ ಯೋಜನೆ ದೇಶದಲ್ಲೇ ಮೊದಲು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಖಾಸಗಿ ಟ್ಯಾಂಕರ್‌ಗಳ ದರ ಏರಿಕೆಯ ಸಮಸ್ಯೆಗೆ ಪರಿಹಾರವಾಗಿ, ಬೆಂಗಳೂರಿನ ಜನತೆಗೆ ನಿಗದಿತ ದರದಲ್ಲಿ ಶುದ್ಧ ನೀರು ದೊರಕುವ ವ್ಯವಸ್ಥೆ ಇದಾಗಿದ್ದು
ಆನ್‌ಲೈನ್ ಬುಕ್ಕಿಂಗ್ ಮಾಡಿದರೆ, ಬಿಐಎಸ್ ಪ್ರಮಾಣೀಕೃತ ಶುದ್ಧ ಕುಡಿಯುವ ನೀರು ಇನ್ನು ಮುಂದೆ ಬೆಂಗಳೂರು ಜಲಮಂಡಳಿಯ ಟ್ಯಾಂಕರ್‌ಗಳ ಮೂಲಕ ಮನೆ ಬಾಗಿಲಿಗೆ ಸರಬರಾಜು ಆಗಲಿದೆ.
ಬೆಂಗಳೂರನ್ನು 'ಟ್ಯಾಂಕರ್ ಸಿಟಿ' ಎಂದು ಕರೆದವರಿಗೆ ಈ ಮೂಲಕ ತಕ್ಕ ಉತ್ತರವನ್ನು ನೀಡಲಿದ್ದೇವೆ ಎಂದು ಶಿವಕುಮಾರ್ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa