ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರದ ಭರವಸೆ
ಗೋರಖಪುರ್, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದ ಗೋರಖ್‌ನಾಥ್ ಮಂದಿರದಲ್ಲಿ ಜನತಾ ದರ್ಶನ ನಡೆಸಿ, ಸಾರ್ವಜನಿಕರಿಂದ ನೇರವಾಗಿ ಕುಂದುಕೊರತೆಗಳನ್ನು ಆಲಿಸಿದರು. ತಾವು ಪಡೆದ ಅರ್ಜಿಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು, ಸಂಬಂಧಿತ ಅಧಿಕ
Yogi


ಗೋರಖಪುರ್, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದ ಗೋರಖ್‌ನಾಥ್ ಮಂದಿರದಲ್ಲಿ ಜನತಾ ದರ್ಶನ ನಡೆಸಿ, ಸಾರ್ವಜನಿಕರಿಂದ ನೇರವಾಗಿ ಕುಂದುಕೊರತೆಗಳನ್ನು ಆಲಿಸಿದರು. ತಾವು ಪಡೆದ ಅರ್ಜಿಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು, ಸಂಬಂಧಿತ ಅಧಿಕಾರಿಗಳಿಗೆ ತಕ್ಷಣದ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತಕ್ಕಾಗಿ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ ಅವರು, ಯಾವುದೇ ರೀತಿಯ ಅನ್ಯಾಯವನ್ನು ರಾಜ್ಯದಲ್ಲಿ ಸಹಿಸದು ಎಂದು ನಾಗರಿಕರಿಗೆ ಭರವಸೆ ನೀಡಿದರು. ಪ್ರತಿಯೊಬ್ಬ ವ್ಯಕ್ತಿಗೂ ನ್ಯಾಯ ಸಿಗಬೇಕು ಎಂಬುದೇ ನಮ್ಮ ಸರ್ಕಾರದ ಉದ್ದೇಶ, ಎಂದು ಅವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande