ರಾಯಚೂರು, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಲೋಕಾಯುಕ್ತ, ರಾಯಚೂರು ಘಟಕದ ವತಿಯಿಂದ ಪೆÇಲೀಸ್ ಅಧೀಕ್ಷಕರಾದ ಸತೀಶ್ ಎಸ್. ಚಿಟಗುಬ್ಬಿ ಅವರ ಮಾರ್ಗದರ್ಶನದಲ್ಲಿ ಏಪ್ರಿಲ್ 23ರಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ, ತಹಶೀಲ್ ಕಚೇರಿ ಎದುರುಗಡೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಕುಂದುಕೊರತೆ ಅರ್ಜಿಗಳನ್ನು ಸ್ವೀಕರಿಸಿ ವಿಚಾರಣೆ ನಡೆಸಲಿದ್ದು. ಯಾವುದೇ ರೀತಿಯ ಸಾರ್ವಜನಿಕ ಸಮಸ್ಯೆ, ಹಗರಣ ಅಥವಾ ದೂರುಗಳನ್ನು ಹೊಂದಿರುವವರು ಈ ದಿನಾಂಕ ಮತ್ತು ಸ್ಥಳದಲ್ಲಿ ಹಾಜರಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪೆÇಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್