ಮೇ 14ರಿಂದ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ
ರಾಯಚೂರು, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಆಂಟಿಮೈಕ್ರೊಬಿಯಲ್ ಪ್ರತಿರೋಧ ತಡೆಗಟ್ಟುವಿಕೆ ಮತ್ತು ಪರ್ಯಾಯಗಳಿಗಾಗಿ ತಂತ್ರಗಳು ಎಂಬ ವಿಷಯದ ಕುರಿತು ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಮೇ 14ರಿಂದ ಮೇ 16ರವರೆಗೆ ಬೆಂಗಳೂರು ಅಕಾಡೆಮಿಯ
ಮೇ 14ರಿಂದ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ


ರಾಯಚೂರು, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಆಂಟಿಮೈಕ್ರೊಬಿಯಲ್ ಪ್ರತಿರೋಧ ತಡೆಗಟ್ಟುವಿಕೆ ಮತ್ತು ಪರ್ಯಾಯಗಳಿಗಾಗಿ ತಂತ್ರಗಳು ಎಂಬ ವಿಷಯದ ಕುರಿತು ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಮೇ 14ರಿಂದ ಮೇ 16ರವರೆಗೆ ಬೆಂಗಳೂರು ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗುತ್ತಿದೆ.

ಈ ಸಮ್ಮೇಳನದಲ್ಲಿ ದೇಶದ ವಿವಿಧ ಪ್ರತಿಷ್ಠಿತ ಸಂಸ್ಥೆಗಳಿಂದ ಖ್ಯಾತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಜೊತೆಗೆ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಯುವ ವಿಜ್ಞಾನಿಗಳಿಗೆ ತಮ್ಮ ಸಂಶೋಧನಾ ಲೇಖನಗಳನ್ನು ಮಂಡಿಸಲು ಅವಕಾಶ ನೀಡಲಾಗುವುದು, ಆಯ್ಕೆಯಾದ ಲೇಖನಗಳಿಗೆ ನಗದು ಬಹುಮಾನವೂ ಇರಲಿದೆ.

ಸಮ್ಮೇಳನದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧಕರು, ಪ್ರಾಧ್ಯಾಪಕರು, ಶೈಕ್ಷಣಿಕ ತಜ್ಞರು ಹಾಗೂ ಯುವ ಉದ್ಯಮಿಗಳು ಭಾಗವಹಿಸಬಹುದಾಗಿದೆ. ಆಸಕ್ತರು ಮೇ 6ರೊಳಗಾಗಿ https://forms.gle/nphLXewAESvuPP5Y8 ಈ ಗೂಗಲ್ ಫಾರ್ಮ್ ಮೂಲಕ ನೋಂದಣಿ ಮಾಡಬಹುದಾಗಿದ್ದು, ಹೆಚ್ಚಿನ ಮಾಹಿತಿಗೆ https://kstacademy.in ವೆಬ್‍ಸೈಟ್ ಅಥವಾ ಮೊಬೈಲ್ ಸಂಖ್ಯೆಗಳು: 9845258894, 9743084194, 9686449019 ಸಂಪರ್ಕಿಸಬಹುದು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande