ಬಳ್ಳಾರಿ, 02 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು ‘ಶೂನ್ಯ’ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು.
1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿ0ಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್