ಜಮ್ಮು, 02 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆಯು ಮಂಗಳವಾರ ಕದನ ವಿರಾಮ ಉಲ್ಲಂಘಿಸಿದೆ. ಪಾಕಿಸ್ತಾನಿ ಪಡೆಗಳು ಒಳನುಸುಳಲು ಯತ್ನಿಸುತ್ತಿದ್ದಾಗ, ಭಾರತೀಯ ಸೇನೆ ಸಮರ್ಥವಾಗಿ ಪ್ರತಿದಾಳಿ ನಡೆಸಿದೆ.
ಆದರೆ, ಈ ದಾಳಿಯಲ್ಲಿ ಪಾಕಿಸ್ತಾನಕ್ಕೆ ಸಂಭವಿಸಿದ ನಷ್ಟದ ಕುರಿತು ಅಧಿಕೃತ ಮಾಹಿತಿ ನೀಡಿಲ್ಲ. ಅಂತಯೇ, ಕ್ರಿಷ್ಣಾ ಘಾಟಿ ವಲಯದಲ್ಲಿ ಏಪ್ರಿಲ್ 01ರಂದು ಪಾಕಿಸ್ತಾನದ ನುಸುಳುವಿಕೆಯಿಂದ ಗಣಿ ಸ್ಫೋಟ ಸಂಭವಿಸಿದ್ದು, ಬಳಿಕ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ.
ಭಾರತೀಯ ಸೇನೆ ನಿಯಂತ್ರಿತ ಮತ್ತು ಸಮತೋಲಿತ ಕ್ರಮದೊಂದಿಗೆ ಪ್ರತ್ಯುತ್ತರ ನೀಡಿದ್ದು, ಪರಿಸ್ಥಿತಿಯನ್ನು ನಿಕಟವಾಗಿ ಪರಿಶೀಲಿಸಲಾಗುತ್ತಿದೆ. 2021ರ ಕದನ ವಿರಾಮ ಒಪ್ಪಂದವನ್ನು ಕಾಪಾಡಿಕೊಳ್ಳಲು ಭಾರತ ಬದ್ಧವಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa