ನವದೆಹಲಿ, 02 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಶಿಕ್ಷಣ ನೀತಿ 2020 ಭಾರತದಲ್ಲಿ ಶಿಕ್ಷಣ ಕ್ಷೇತ್ರದ ಬದಲಾವಣೆಗೆ ಪ್ರಮುಖ ಹಂತವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಎನ್ಇಪಿ 2020 ಕೇವಲ ಸುಧಾರಣೆಯಲ್ಲ, ಇದನ್ನು ಭಾರತದ ಬೌದ್ಧಿಕ ಪುನರುಜ್ಜೀವನ ಎಂದು ಅವರು ವರ್ಣಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಮೋದಿ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ ಪ್ರತಿಕ್ರಿಯಿಸುತ್ತಾ, ಶಿಕ್ಷಣ ಮತ್ತು ನಾವೀನ್ಯತೆ ಮೂಲಕ ಸ್ವಾವಲಂಬಿ, ಜಾಗತಿಕವಾಗಿ ಸ್ಪರ್ಧಾತ್ಮಕ ರಾಷ್ಟ್ರವನ್ನು ನಿರ್ಮಿಸಲು ಎನ್ಇಪಿ 2020 ಸಹಾಯ ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa