ಕಲಬುರಗಿ, 02 ಏಪ್ರಿಲ್ (ಹಿ.ಸ.) :
ಆಂಕರ್ : ವಾಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಲಬುರಗಿಯಲ್ಲಿ ಎಸ್ ಡಿಪಿಐ ಸಂಘಟನೆ ಪ್ರತಿಭಟನೆ ನಡೆಸಿದೆ. ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ವಕ್ಫ್ ತಿದ್ದುಪಡಿ ಕಾಯ್ದೆ ಪ್ರತಿಗಳನ್ನು ಹರಿದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಂದ ನಂತರ ಮುಸ್ಲಿಂ ರ ವಿರುದ್ಧವಾದ ಕಾಯ್ದೆಗಳನ್ನು ಜಾರಿಗೆ ತಂದು ಮುಸ್ಲಿಂರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಅಲ್ಲದೆ ಮುಸ್ಲಿಂ ಸಮುದಾಯದ ಆಸ್ತಿಗಳ ಮೇಲೆ ಅನಗತ್ಯ ಹಸ್ತಕ್ಷೇಪ ಮಾಡುತ್ತಿದೆ. ವಕ್ಫ್ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Samarth biral