ಸಿಂಧ್‌ ಪ್ರಾಂತ್ಯದಲ್ಲಿ ಭೀಕರ ಬಸ್ ಅಪಘಾತ : 16 ಸಾವು
ಇಸ್ಲಾಮಾಬಾದ್, 22 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಮ್ಶೋರೋ ಜಿಲ್ಲೆಯಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 16 ಜನರು ಮೃತಪಟ್ಟಿದ್ದು, 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಶವಗಳನ್ನು ಸ್ಥಳದಿಂದ
Accident


ಇಸ್ಲಾಮಾಬಾದ್, 22 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಮ್ಶೋರೋ ಜಿಲ್ಲೆಯಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 16 ಜನರು ಮೃತಪಟ್ಟಿದ್ದು, 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಅಪಘಾತದ ಬಳಿಕ ಶವಗಳನ್ನು ಸ್ಥಳದಿಂದ ಹೊರತೆಗೆಯಲಾಗಿದೆ. ಗಾಯಾಳುಗಳನ್ನು ಲಿಯಾಖತ್ ವಿಶ್ವವಿದ್ಯಾಲಯ ಆಸ್ಪತ್ರೆ, ಹೈದರಾಬಾದ್ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande