ಐಪಿಎಲ್ : ಮುಂಬೈ ಇಂಡಿಯನ್ಸ್‌ಗೆ ಸತತ ನಾಲ್ಕನೇ ಜಯ
ಹೈದರಾಬಾದ್, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಐಪಿಎಲ್ 2025ರ 41ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್‌ನ್ನು 7 ವಿಕೆಟ್‌ಗಳಿಂದ ಸೋಲಿಸಿ ಸತತ ನಾಲ್ಕನೇ ಗೆಲುವು ದಾಖಲಿಸಿದೆ. ಈ ಜಯದೊಂದಿಗೆ ಮುಂಬೈ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದೆ. ಹೈದರಾಬಾದ್ ನೀಡಿದ 144
Ipl


ಹೈದರಾಬಾದ್, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಐಪಿಎಲ್ 2025ರ 41ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್‌ನ್ನು 7 ವಿಕೆಟ್‌ಗಳಿಂದ ಸೋಲಿಸಿ ಸತತ ನಾಲ್ಕನೇ ಗೆಲುವು ದಾಖಲಿಸಿದೆ. ಈ ಜಯದೊಂದಿಗೆ ಮುಂಬೈ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದೆ.

ಹೈದರಾಬಾದ್ ನೀಡಿದ 144 ರನ್ ಗುರಿಯನ್ನು ಮುಂಬೈ 16ನೇ ಓವರ್‌ನಲ್ಲಿ ಸಾಧಿಸಿತು. ರೋಹಿತ್ ಶರ್ಮಾ 70 ರನ್ (8 ಬೌಂಡರಿ, 3 ಸಿಕ್ಸರ್) ಮತ್ತು ಸೂರ್ಯಕುಮಾರ್ ಯಾದವ್ ಅಜೇಯ 40 ರನ್ ಗಳಿಸಿದರು. ಟ್ರೆಂಟ್ ಬೌಲ್ಟ್ 4 ವಿಕೆಟ್ ಪಡೆದು ಪಂದ್ಯ ಶ್ರೇಷ್ಠನಾಗಿ ಆಯ್ಕೆಗೊಂಡರು.

ಹೈದರಾಬಾದ್ ಪರ ಕ್ಲಾಸೆನ್ ಮತ್ತು ಅಭಿನವ್ ಮನೋಹರ್ 99 ರನ್ ಪಾಲುದಾರಿಕೆ ಕಟ್ಟಿ 143 ರನ್ ಸ್ಕೋರ್ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande