ಪಾಕಿಸ್ತಾನದಲ್ಲಿ ಎನ್‌ಎಸ್‌ಸಿ ತುರ್ತು ಸಭೆ
ಇಸ್ಲಾಮಾಬಾದ್, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಸರ್ಕಾರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಲು ನಿರ್ಧರಿಸಿದ್ದು ಮತ್ತು ಐದು ರಾಜತಾಂತ್ರಿಕ ದಂಡನಾ ಕ್ರಮಗಳನ್ನು ಘೋಷಿಸಿದ್ದು, ಇದರಿಂದ ಪಾಕಿಸ್ತಾನಕ್ಕ
Pak pm


ಇಸ್ಲಾಮಾಬಾದ್, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಸರ್ಕಾರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಲು ನಿರ್ಧರಿಸಿದ್ದು ಮತ್ತು ಐದು ರಾಜತಾಂತ್ರಿಕ ದಂಡನಾ ಕ್ರಮಗಳನ್ನು ಘೋಷಿಸಿದ್ದು, ಇದರಿಂದ ಪಾಕಿಸ್ತಾನಕ್ಕೆ ನಡುಕ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ರಾಷ್ಟ್ರೀಯ ಭದ್ರತಾ ಸಮಿತಿಯ ತುರ್ತು ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಪ್ರಮುಖ ಸಚಿವರು, ಸೇನಾ ಹಾಗೂ ಗುಪ್ತಚರ ಮುಖ್ಯಸ್ಥರು ಭಾಗವಹಿಸಲಿದ್ದಾರೆ.

ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಪಹಲ್ಗಾಮ್ ದಾಳಿಗೆ ಪಾಕಿಸ್ತಾನವನ್ನು ನೇರವಾಗಿ ಜವಾಬ್ದಾರಿಗೊಳಿಸಿದ್ದಾರೆ. ಪಾಕಿಸ್ತಾನ ಈ ಆರೋಪಗಳಿಗೆ ಪ್ರತಿಕ್ರಿಯೆ ನೀಡದಿದ್ದರೂ, ದಾಳಿಯಲ್ಲಿ ಜೀವಹಾನಿಗೆ ಸಂತಾಪ ಸೂಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande