ಭಯೋತ್ಪಾದಕರಿಗೆ ಕಲ್ಪನೆಗೂ ಮೀರಿದ ಶಿಕ್ಷೆ : ಮೋದಿ
ಮಧುಬನಿ, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಏಪ್ರಿಲ್ 22 ರಂದು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ, ಭಯೋತ್ಪಾದಕರು ಅಮಾಯಕ ದೇಶವಾಸಿಗಳನ್ನು ಕೊಂದ ಕ್ರೌರ್ಯದಿಂದ ಇಡೀ ದೇಶವು ದುಃಖಿತವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಸಂತ್ರಸ್ತರ ಕುಟುಂಬದವರ ದುಃಖದಲ್ಲಿ ಇಡೀ ದೇಶವೇ
Pm


ಮಧುಬನಿ, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಏಪ್ರಿಲ್ 22 ರಂದು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ, ಭಯೋತ್ಪಾದಕರು ಅಮಾಯಕ ದೇಶವಾಸಿಗಳನ್ನು ಕೊಂದ ಕ್ರೌರ್ಯದಿಂದ ಇಡೀ ದೇಶವು ದುಃಖಿತವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಸಂತ್ರಸ್ತರ ಕುಟುಂಬದವರ ದುಃಖದಲ್ಲಿ ಇಡೀ ದೇಶವೇ ನಿಂತಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಕುಟುಂಬದ ಸದಸ್ಯರು ಶೀಘ್ರ ಗುಣಮುಖರಾಗಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ.

ಈ ದಾಳಿ ನಡೆಸಿದ ಭಯೋತ್ಪಾದಕರಿಗೆ ಮತ್ತು ಈ ದಾಳಿಗೆ ಸಂಚು ರೂಪಿಸಿದವರಿಗೆ ಅವರ ಕಲ್ಪನೆಗೂ ಮೀರಿದ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande