ಬಳ್ಳಾರಿ, 25 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ರೇಡಿಯೋಪಾರ್ಕ್‍ನಲ್ಲಿ ಇರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಈ ವರ್ಷದಿಂದ ಬಿಎಸ್ಸಿ ತರಗತಿಗೆ ಪ್ರವೇಶಾತಿಯನ್ನು ಆರಂಭಿಸಲಾಗಿದೆ ದ್ವಿತೀಯ ಪಿಯುಸಿ ಸೈನ್ಸ್ ಪಾಸಾದ ವಿದ್ಯಾರ್ಥಿನಿಯರು ಪ್ರವೇಶ ಪಡೆಯಬಹುದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಪ್ರಜ್ಞಾ ಕೆ.ವಿ. ಅವರು ತಿಳಿಸಿದ್ದಾರೆ.
ಕಾಲೇಜಿನಲ್ಲಿ ಶುಕ್ರವಾರ ಪತ್ರಕರ್ತರಿಗೆ ಈ ಮಾಹಿತಿ ನೀಡಿದ ಅವರು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು 2014ರಲ್ಲಿ ಆರಂಭವಾಗಿದೆ. ಈಗ ಕಾಲೇಜಿನಲ್ಲಿ 351 ವಿದ್ಯಾರ್ಥಿನಿಯರಿದ್ದಾರೆ. ಕಾಲೇಜಿನಲ್ಲಿ ಬಿಎ, ಬಿಕಾಂ ಮತ್ತು ಬಿಎಸ್ಸಿಗೆ
ಪ್ರವೇಶಾವಕಾಶವಿದೆ. ಅತ್ಯಂತ ಕಡಿಮೆ ಶುಲ್ಕದಲ್ಲಿ, ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಹೇಳಿದರು.
ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಆಪ್ತ ಸಮಾಲೋಚನೆ ವ್ಯವಸ್ಥೆ ಇದೆ. ಆಂತರಿಕ ದೂರು ಸಮಿತಿ ರಚನೆಯಾಗಿದೆ. ಹಳೆಯ ವಿದ್ಯಾರ್ಥಿಗಳ ಸಂಘ ಅಸ್ತಿತ್ವದಲ್ಲಿದೆ. ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಸರ್ಕಾರಿ ಕಾಯ್ದೆಯ ವ್ಯಾಪ್ತಿಯ ವಿದ್ಯಾರ್ಥಿ ವೇತನ ಸೌಲಭ್ಯಗಳು ಜಾರಿಯಲ್ಲಿವೆ ಎಂದರು.
ಕನ್ನಡ ವಿಭಾಗದ ಮುಖ್ಯಸ್ಥರಾದ ಕೊಟ್ರೇಶ್ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್