ಪಾಕಿಸ್ತಾನಿ ನಾಗರಿಕರ ಮೇಲೆ ಗುಪ್ತಚರ ಇಲಾಖೆ ನಿಗಾ
ಕೋಲ್ಕತ್ತಾ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದಲ್ಲಿ ದೀರ್ಘಾವಧಿ ವೀಸಾದಡಿ ವಾಸಿಸುತ್ತಿರುವ 30 ಪಾಕಿಸ್ತಾನಿ ನಾಗರಿಕರ ಮೇಲೆ ಗುಪ್ತಚರ ಸಂಸ್ಥೆಗಳು ನಿಗಾ ಮುಂದುವರೆಸಿವೆ. ಇವರಲ್ಲಿ ಹೆಚ್ಚಿನವರು ಭಾರತೀಯ ಪುರುಷರನ್ನು ವಿವಾಹವಾದ ಮಹಿಳೆಯರ
ಪಾಕಿಸ್ತಾನಿ ನಾಗರಿಕರ ಮೇಲೆ ಗುಪ್ತಚರ ಇಲಾಖೆ ನಿಗಾ


ಕೋಲ್ಕತ್ತಾ, 25 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದಲ್ಲಿ ದೀರ್ಘಾವಧಿ ವೀಸಾದಡಿ ವಾಸಿಸುತ್ತಿರುವ 30 ಪಾಕಿಸ್ತಾನಿ ನಾಗರಿಕರ ಮೇಲೆ ಗುಪ್ತಚರ ಸಂಸ್ಥೆಗಳು ನಿಗಾ ಮುಂದುವರೆಸಿವೆ. ಇವರಲ್ಲಿ ಹೆಚ್ಚಿನವರು ಭಾರತೀಯ ಪುರುಷರನ್ನು ವಿವಾಹವಾದ ಮಹಿಳೆಯರಾಗಿದ್ದಾರೆ. ಇವರ ಸಂಪರ್ಕಗಳು ಮತ್ತು ಚಟುವಟಿಕೆಗಳ ಬಗ್ಗೆ ತನಿಖೆ ನಡೆಯುತ್ತಿದೆ.

ಕೇಂದ್ರ ಸರ್ಕಾರವು ಸಾರ್ಕ್ ವೀಸಾ ಯೋಜನೆಯಡಿಯಲ್ಲಿ ನೀಡಿದ ಎಲ್ಲ ಪಾಕಿಸ್ತಾನಿ ವೀಸಾಗಳನ್ನು ರದ್ದುಗೊಳಿಸಿದ್ದು, ಇವರು ಭಾರತದಿಂದ ಹೊರಡುವ ಸಾಧ್ಯತೆಯೂ ಇದೆ. ಹೆಚ್ಚಿನ ಭದ್ರತೆಗಾಗಿ ಕೆಲವು ಪಾಕಿಸ್ತಾನಿ ಮಹಿಳೆಯರು ಮತ್ತು ಅವರ ಕುಟುಂಬದವರನ್ನು ವಿಚಾರಣೆಗೂ ಒಳಪಡಿಸಲಾಗಬಹುದು ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande