ಶ್ರೀನಗರ, 25 ಏಪ್ರಿಲ್ (ಹಿ.ಸ.) :
ಆ್ಯಂಕರ್ : ದೇಶದ ಭದ್ರತೆಯ ವಿಷಯದಲ್ಲಿ ಎಲ್ಲ ಪ್ರತಿ ಪಕ್ಷಗಳು ಕೇಂದ್ರ ಸರ್ಕಾರದೊಂದಿಗೆ ಬಲವಾಗಿ ನಿಂತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಶ್ರೀನಗರದಲ್ಲಿ ಪೀಡಿತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ಹೇಳಿ ಮಾತನಾಡಿದ ಅವರು ಸಮಾಜವನ್ನು ವಿಭಜಿಸಲು ಈ ದಾಳಿ ನಡೆದಿದ್ದು, ದೇಶದ ಎಲ್ಲ ಭಾಗಗಳಿಂದ ಒಗ್ಗಟ್ಟಿನ ಪ್ರತಿಕ್ರಿಯೆ ಅಗತ್ಯವಿದೆ ಎಂದು ಹೇಳಿದರು. ಇದೇ ವೇಳೆ ಕೋಮು ಸೌಹಾರ್ದತೆ ಕಾಪಾಡುವುದು ಮಹತ್ವವಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa