ಐಪಿಎಲ್: ತವರು ನೆಲದಲ್ಲಿ ಆರ್‌ಸಿಬಿಗೆ ಮೊದಲ ಗೆಲುವು
ಬೆಂಗಳೂರು, 25 ಏಪ್ರಿಲ್ (ಹಿ.ಸ.): ಆ್ಯಂಕರ್: ಐಪಿಎಲ್ 2025ರ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ತವರು ಮೈದಾನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 11 ರನ್‌ಗಳ ಜಯ ಸಾಧಿಸಿ, ತವರಿನಲ್ಲಿ ಮೊದಲ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್
Ipl


ಬೆಂಗಳೂರು, 25 ಏಪ್ರಿಲ್ (ಹಿ.ಸ.):

ಆ್ಯಂಕರ್:

ಐಪಿಎಲ್ 2025ರ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ತವರು ಮೈದಾನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 11 ರನ್‌ಗಳ ಜಯ ಸಾಧಿಸಿ, ತವರಿನಲ್ಲಿ ಮೊದಲ ಗೆಲುವು ದಾಖಲಿಸಿತು.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 5 ವಿಕೆಟ್‌ಗೆ 205 ರನ್ ಕಲೆ ಹಾಕಿತು. ವಿರಾಟ್ ಕೊಹ್ಲಿ (70), ದೇವದತ್ ಪಡಿಕ್ಕಲ್ (50) ಮತ್ತು ಟಿಮ್ ಡೇವಿಡ್ (23) ಉತ್ತಮ ಆಟವಾಡಿದರು. ರಾಜಸ್ಥಾನ ಪರ ಸಂದೀಪ್ ಶರ್ಮಾ 2 ವಿಕೆಟ್ ಪಡೆದರು.

206 ರನ್ ಗುರಿ ಬೆನ್ನಟ್ಟಿದ ರಾಜಸ್ಥಾನ, ಯಶಸ್ವಿ ಜೈಸ್ವಾಲ್ (49) ಹಾಗೂ ಧ್ರುವ್ ಜುರೆಲ್ (47) ಅವರ ಉತ್ತಮ ಪ್ರದರ್ಶನದ ನಡುವೆಯೂ, ಹ್ಯಾಜಲ್‌ವುಡ್ (4 ವಿಕೆಟ್) ಅವರ ಮಾರಕ ಬೌಲಿಂಗ್ ದಾಳಿಗೆ. ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗೆ 194 ರನ್ ಗಳಿಸಿತು.

ಈ ಗೆಲುವಿನಿಂದ ಆರ್‌ಸಿಬಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande