ರಾಯಚೂರು, 25 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಚಾಮರಾಜನಗರ ಮೂಲದ ಅನುಪಮಾ (20) ಮೃತ ಗರ್ಭಿಣಿ. ಅನುಪಮಾ ಹಾಗೂ ರಾಯಚೂರಿನ ಬೂದಿಹಾಳದ ನಾಗರಾಜ್ ಇನ್ಸ್‍ಸ್ಟಾಗ್ರಾಂನಲ್ಲಿ ಪರಿಚಯವಾಗಿ ಇಬ್ಬರು ಪ್ರೀತಿಸಿ 11 ತಿಂಗಳ ಹಿಂದೆ ಮದುವೆಯಾಗಿದ್ದರು.
ಮದುವೆಯಾದ ಹೊಸದರಲ್ಲಿ ಗಂಡನ ಮನೆಯಲ್ಲಿ ಎಲ್ಲವೂ ಚೆನ್ನಾಗಿಯೇ ನೋಡಿಕೊಳ್ಳುತ್ತಿದರು. ಇತ್ತೀಚೆಗೆ ನಾಗರಾಜ್ ಮನೆಯವರು ನಿನ್ನದು ಜಾತಿ ಬೇರೆ ನೀನು ಪ್ರೀತಿಸಿ ಮದುವೆ ಆಗಿದ್ದಕ್ಕೆ ನಮಗೆ ವರದಕ್ಷಿಣೆ ಸಿಕ್ಕಿಲ್ಲವೆಂದು ಕಿರುಕುಳ ನೀಡುತ್ತಿದ್ದರು ಗಂಡನ ಮನೆಯವರ ಕಿರುಕುಳ, ಹಿಂಸೆಯಿಂದಲೇ ತಮ್ಮ ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅನುಪಮಾ ಅವರ ಪೊಷಕರು ಆರೋಪಿಸಿದ್ದಾರೆ.
ಅನುಪಮಾ ಪತಿ ನಾಗರಾಜ್ ಸೇರಿ 6 ಜನರ ವಿರುದ್ಧ ಸಿಂಧನೂರು ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಆರೋಪಿ ಪತಿ ನಾಗರಾಜ್‍ನನ್ನ ಪೆÇಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್