ಚೆನೈ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಐಪಿಎಲ್ ಪಂದ್ಯದಲ್ಲಿ ಸಿಎಸ್‌ಕೆ ತಂಡವು ಹೈದರಾಬಾದ್ ವಿರುದ್ಧ 5 ವಿಕೆಟ್‌ಗಳ ಸೋಲು ಅನುಭವಿಸಿದೆ. ತಂಡದ ಸೋಲಿಗೆ ಕಡಿಮೆ ರನ್ ಗಳಿಕೆ ಕಾರಣ ಎಂದು ನಾಯಕ ಎಂ.ಎಸ್. ಧೋನಿ ಹೇಳಿದರು.
ಮಧ್ಯ ಓವರ್‌ಗಳಲ್ಲಿ ಸ್ಪಿನ್ನರ್‌ಗಳ ವಿರುದ್ಧ ತಮ್ಮ ತಂಡದ ಬ್ಯಾಟ್ಸ್‌ಮನ್ ಗಳು ರನ್ ಗಳಿಸಲು ತಂಡ ಪರದಾಡುವಂತಾಯಿತು, ಡೆವಾಲ್ಡ್ ಬ್ರೆವಿಸ್ 25 ಎಸೆತಗಳಲ್ಲಿ 42 ರನ್ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟ್ಸ್‌ಮನ್ ಗಳು ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲವಾಗಿದ್ದು ಸೋಲಿಗೆ ಕಾರಣ ಎಂದರು.
ಇದುವರೆಗೂ ಆಡಿರುವ 9 ಪಂದ್ಯಗಳಲ್ಲಿ 7 ಸೋಲು ಕಂಡಿರುವ ಸಿಎಸ್‌ಕೆ, ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa