ಉದ್ಯೋಗಾವಕಾಶ ಹೆಚ್ಚಿಸಲು ಸರ್ಕಾರ ಬದ್ಧ : ಪ್ರಧಾನಿ ಮೋದಿ
ನವದೆಹಲಿ, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತದ ಯುವಕರು ತಮ್ಮ ಪರಿಶ್ರಮ ಹಾಗೂ ನಾವೀನ್ಯತೆಯ ಮೂಲಕ ಜಾಗತಿಕ ಮಟ್ಟದಲ್ಲಿ ದೇಶದ ಸಾಮರ್ಥ್ಯವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಸರ್ಕಾರಿ ಇಲಾಖೆಗಳಲ್ಲಿ ನೇಮಕಗೊಂಡ 51,000ಕ್ಕೂ ಹೆಚ್ಚು ಯುವಕರಿಗೆ ವೀಡಿಯೋ
Pm


ನವದೆಹಲಿ, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತದ ಯುವಕರು ತಮ್ಮ ಪರಿಶ್ರಮ ಹಾಗೂ ನಾವೀನ್ಯತೆಯ ಮೂಲಕ ಜಾಗತಿಕ ಮಟ್ಟದಲ್ಲಿ ದೇಶದ ಸಾಮರ್ಥ್ಯವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

ಸರ್ಕಾರಿ ಇಲಾಖೆಗಳಲ್ಲಿ ನೇಮಕಗೊಂಡ 51,000ಕ್ಕೂ ಹೆಚ್ಚು ಯುವಕರಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರ ವಿತರಿಸಿ ಅವರು ಮಾತನಾಡಿದರು.

ಈ ಬಜೆಟ್‌ನಲ್ಲಿ ಘೋಷಿಸಲಾದ ಉತ್ಪಾದನಾ ಮಿಷನ್ ಹಾಗೂ 'ಮೇಕ್ ಇನ್ ಇಂಡಿಯಾ' ಯೋಜನೆಗಳು ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿವೆ. ಮುಂಬೈನಲ್ಲಿ ನಡೆಯಲಿರುವ 'ವೇವ್ಸ್ 2025' ಶೃಂಗಸಭೆಯ ಮೂಲಕ ಮಾಧ್ಯಮ, ಗೇಮಿಂಗ್ ಮತ್ತು ಮನರಂಜನೆ ಕ್ಷೇತ್ರದ ಯುವ ನಾವೀನ್ಯಕಾರರಿಗೆ ಅವಕಾಶ ಸಿಗಲಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande