ಗುಜರಾತ್‌ನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಬಂಧನ
ಸೂರತ್, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಹಲ್ಗಾಮ್ ದಾಳಿಯ ನಂತರ ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ರಾಜತಾಂತ್ರಿಕ ನಿರ್ಬಂಧ ಹೇರಿದ್ದು, ರಾಜ್ಯಗಳು ಅಕ್ರಮ ವಲಸಿಗರ ವಿರುದ್ಧ ಕ್ರಮ ಕೈಗೊಂಡಿವೆ. ಪ್ರಧಾನ ಮಂತ್ರಿ ಮೋದಿ ಅವರ ತವರು ರಾಜ್ಯ ಗುಜರಾತನಲ್ಲಿ ಬಾಂಗ್ಲಾ ದೇಶದಿಂದ ಅಕ್ರಮವಾಗಿ ಬಂದು ನೆಲೆಸಿದ್ದ
Arrest


ಸೂರತ್, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪಹಲ್ಗಾಮ್ ದಾಳಿಯ ನಂತರ ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ರಾಜತಾಂತ್ರಿಕ ನಿರ್ಬಂಧ ಹೇರಿದ್ದು, ರಾಜ್ಯಗಳು ಅಕ್ರಮ ವಲಸಿಗರ ವಿರುದ್ಧ ಕ್ರಮ ಕೈಗೊಂಡಿವೆ. ಪ್ರಧಾನ ಮಂತ್ರಿ ಮೋದಿ ಅವರ ತವರು ರಾಜ್ಯ ಗುಜರಾತನಲ್ಲಿ ಬಾಂಗ್ಲಾ ದೇಶದಿಂದ ಅಕ್ರಮವಾಗಿ ಬಂದು ನೆಲೆಸಿದ್ದ 550ಕ್ಕೂ ಹೆಚ್ಚು ವಲಸಿಗರನ್ನು ಅಹಮದಾಬಾದ್ ಮತ್ತು ಸೂರತ್‌ನಲ್ಲಿ ಬೃಹತ್ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

ಗುಜರಾತ ವಿಶೇಷ ಕಾರ್ಯಾಚರಣೆ ಗುಂಪು ಪಡೆ, ಅಪರಾಧ ಶಾಖೆ, ಮಾನವ ಕಳ್ಳಸಾಗಣೆ ವಿರೋಧಿ ಘಟಕ ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ ನಕಲಿ ದಾಖಲೆಗಳೊಂದಿಗೆ ಬಾಂಗ್ಲಾ ಪ್ರಜೆಗಳು ಭಾರತದಲ್ಲಿ ವಾಸಿಸುತ್ತಿದ್ದು ಪತ್ತೆಯಾಗಿದ್ದು ತನಿಖೆ ನಂತರ ಅವರನ್ನು ಗಡಿಪಾರು ಮಾಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande