ಕರಾಚಿ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪಾಕಿಸ್ತಾನ ಫೆಡರಲ್ ಸರ್ಕಾರದ ಸಿಂಧೂ ನದಿಗೆ ಅಡ್ಡಲಾಗಿ ಕಾಲುವೆಗಳ ಜಾಲ ನಿರ್ಮಾಣ ಯೋಜನೆಗೆ ಸಿಂಧ್ ಪ್ರಾಂತ್ಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಕರಾಚಿ ಗ್ರಾಮೀಣ ಭಾಗದಲ್ಲಿ ಸಾವಿರಾರು ಜನರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಗಳಿಂದಾಗಿ 15,000ಕ್ಕೂ ಹೆಚ್ಚು ಸರಕು ವಾಹನಗಳು ಅಡಕೆಯಾಗಿದ್ದು, ಆರ್ಥಿಕ ಕಾರ್ಯಾಚರಣೆಗಳಿಗೆ ತೀವ್ರ ಅಡ್ಡಿ ಉಂಟಾಗಿದೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಸರ್ಕಾರ ಮೇ 2ರ ತನಕ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ವಕೀಲರು ಸಹ ಚಳುವಳಿಗೆ ಸೇರಿದ್ದು, ಪರಿಸ್ಥಿತಿ ಹತೋಟಿಗೆ ಬಾರದ ಸ್ಥಿತಿಗೆ ತಲುಪಿದೆ. ಇದೇ ವೇಳೆ ಸಿಂಧ್ ಮುಖ್ಯಮಂತ್ರಿ ಮುರಾದ್ ಅಲಿ ಶಾ ಅವರು ಪ್ರತಿಭಟನಾಕಾರರನ್ನು ಸಂವಾದಕ್ಕೆ ಆಹ್ವಾನಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa