ಸ್ವಾತಂತ್ರ್ಯ ಹೋರಾಟದಲ್ಲಿ ಸಂಘ ಪರಿವಾರದ ಕೊಡುಗೆ ಇಲ್ಲ : ಸಿದ್ದರಾಮಯ್ಯ
ಮೈಸೂರು, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ ಈಗ ದೇಶಭಕ್ತಿ ಬಗ್ಗೆ ಮಾತನಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾಂಗ್ರೆಸ್ ಕಾರ್ಯಕರ್ತರಿಗೆ ಇರಬೇಕು ಎ
Cm


ಮೈಸೂರು, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ ಈಗ ದೇಶಭಕ್ತಿ ಬಗ್ಗೆ ಮಾತನಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾಂಗ್ರೆಸ್ ಕಾರ್ಯಕರ್ತರಿಗೆ ಇರಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ಯುವ ಕ್ರಾಂತಿ ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ ಎಂದರು.

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ ಈಗ ದೇಶಭಕ್ತಿ ಬಗ್ಗೆ ಮಾತನಾಡುತ್ತರೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾಧಿ ಹಾಕಿದವರು ನೆಹರು. ಬಹುತ್ವದ ಭಾರತದ ನೆಲದಲ್ಲಿ ಏಕತೆ ತಂದು ಸಹಿಷ್ಣುಣತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ ಎಂದರು.

ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಬಿರುಕು ಮೂಡಿಸಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್ ನಲ್ಲಿ ಉಳಿಯುವುದು ಅನುಮಾನ ಎಂದರು.

ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ. ಹೀಗಾಗಿ ಬಿಜೆಪಿ ಸಂವಿಧಾನವನ್ನೇ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande