ಇಸ್ಲಾಮಾಬಾದ್, 27 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪಹಲ್ಗಾಮ್ ದಾಳಿಯ ನಂತರ ಭಾರತ ತೆಗೆದುಕೊಂಡ ಕಠಿಣ ಕ್ರಮಗಳಿಂದ ಪಾಕಿಸ್ತಾನ ಕಂಗಾಲಾಗಿದೆ. ಪ್ರಧಾನಿ ಶಹಬಾಜ್ ಷರೀಫ್ ಮತ್ತು ಬಿಲಾವಲ್ ಭುಟ್ಟೋ ನಂತರ, ಗೃಹ ಸಚಿವ ಮೊಹ್ಸಿನ್ ನಖ್ವಿ ಕೂಡ ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಭಾರತ ಪಾಕಿಸ್ತಾನಕ್ಕೆ ಹಾನಿ ಮಾಡುವ ಪ್ರಯತ್ನ ಮಾಡಿದರೆ, ಪಾಕಿಸ್ತಾನಿಗಳು ತಮ್ಮ ಕೊನೆಯ ಉಸಿರಿನವರೆಗೆ ಹೋರಾಡುತ್ತಾರೆ ಎಂದು ನಖ್ವಿ ಎಚ್ಚರಿಸಿದ್ದಾರೆ.
ಪಾಕಿಸ್ತಾನದಲ್ಲಿ ಭಾರತ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ. ಇದೇ ವೇಳೆ ಭಾರತವು ಸಿಂಧೂ ನದಿಯ ಜಲ ಒಪ್ಪಂದವನ್ನು ರದ್ದುಗೊಳಿಸಲು ಮುಂದಾಗಿರುವುದು ಪಾಕಿಸ್ತಾನದಲ್ಲಿ ಆತಂಕ ಹೆಚ್ಚಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa