ಬಳ್ಳಾರಿಯು ರಂಗಭೂಮಿಯ ತವರೂರು : ಡಾ.ಸುಜಾತ ಜಂಗಮಶೆಟ್ಟಿ
ಬಳ್ಳಾರಿ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲೆಯು ರಂಗಭೂಮಿಯ ತವರೂರರಾಗಿದೆ ಎಂದು ಕಲಬುರಗಿ ರಂಗಾಯಣದ ನಿರ್ದೇಶಕರಾದ ಡಾ.ಸುಜಾತ ಜಂಗಮಶೆಟ್ಟಿ ಅವರು ಹೇಳಿದ್ದಾರೆ. ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ರಂಗಭೂಮಿ ಕಲಾವಿ
ಬಳ್ಳಾರಿಯು ರಂಗಭೂಮಿಯ ತವರೂರು: ಡಾ.ಸುಜಾತ ಜಂಗಮಶೆಟ್ಟಿ


ಬಳ್ಳಾರಿಯು ರಂಗಭೂಮಿಯ ತವರೂರು: ಡಾ.ಸುಜಾತ ಜಂಗಮಶೆಟ್ಟಿ


ಬಳ್ಳಾರಿಯು ರಂಗಭೂಮಿಯ ತವರೂರು: ಡಾ.ಸುಜಾತ ಜಂಗಮಶೆಟ್ಟಿ


ಬಳ್ಳಾರಿ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲೆಯು ರಂಗಭೂಮಿಯ ತವರೂರರಾಗಿದೆ ಎಂದು ಕಲಬುರಗಿ ರಂಗಾಯಣದ ನಿರ್ದೇಶಕರಾದ ಡಾ.ಸುಜಾತ ಜಂಗಮಶೆಟ್ಟಿ ಅವರು ಹೇಳಿದ್ದಾರೆ.

ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ರಂಗಭೂಮಿ ಕಲಾವಿದರೊಂದಿಗೆ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಲಬುರಗಿ ರಂಗಾಯಣವು ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಗೂ ಹೊಂದಿಕೊಂಡಿದೆ. ಕಲಬುರಗಿ ರಂಗಾಯಣವನ್ನು ಕ.ಕ ಭಾಗದ ಹೋಬಳಿ ಮಟ್ಟದಲ್ಲಿಯೂ ತಲುಪಬೇಕು ಎಂಬುದು ಕಲಬುರಗಿ ರಂಗಾಯಣದ ಮುಖ್ಯ ಉದ್ದೇಶವಾಗಿದೆ ಎಂದರು.

ಬಳ್ಳಾರಿ ಜಿಲ್ಲೆಗೆ ಡಾ.ಜೋಳದರಾಶಿ ದೊಡ್ಡನಗೌಡ, ರಾಘವ, ಬೆಳಗಲ್ಲು ವೀರಣ್ಣ, ಸುಭದ್ರಮ್ಮ ಮಾನ್ಸೂರು ಸೇರಿದಂತೆ ಹಲವಾರು ಗಣ್ಯರ ಕೊಡುಗೆ ಅಪಾರವಿದೆ ಎಂದು ತಿಳಿಸಿದರು.

ಪ್ರಸ್ತುತದಲ್ಲಿ ರಂಗಭೂಮಿಯು ಅಳಿವಿಂಚಿನಲ್ಲಿದೆ. ರಂಗ ಕಲೆಯನ್ನು ಮತ್ತು ರಂಗಭೂಮಿ ಕಲಾವಿದರನ್ನು ಪೆÇ್ರೀತ್ಸಾಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಯುವಪೀಳಿಗೆಯು ಸಹ ರಂಗ ಪ್ರವೇಶಿಸಲು ಶಾಲಾ-ಕಾಲೇಜುಗಳಲ್ಲಿ ನಾಟಕ ರಂಗದ ಕುರಿತು ಅರಿವು ಸಂವಾದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು.

*ರಂಗದಂಗಳದಲ್ಲಿ ಮಾತುಕತೆ:

ಕಲಬುರಗಿ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿನ ರಂಗಕಲಾವಿದರನ್ನು ಜೊತೆಗೂಡಿಸಿ ರಂಗನಾಟಕ ಉಳಿಯುವಿಕೆ ಮತ್ತು ಬೆಳೆಸುವಿಕೆಗೆ ಅನಿಸಿಕೆ-ಅಭಿಪ್ರಾಯಗಳನ್ನು ಸಂಗ್ರಹಿಸಲು ‘ರಂಗದಂಗಳದಲ್ಲಿ ಮಾತುಕತೆ’ ಸಭೆ ಏರ್ಪಡಿಸಲಾಗುವುದು ಎಂದರು.

ನಾಟಕ ರಚನಾ ಶಿಬಿರ:

ಕ.ಕ ಭಾಗದಲ್ಲಿ ಇನ್ನು ಹಳೆಯ ನಾಟಕ ಶೈಲಿ ಒಳಗೊಂಡಿದೆ. ಇದನ್ನು ಹೊಸ ಶೈಲಿಗೆ ಅಭಿವೃದ್ಧಿ ಪಡಿಸಬೇಕಿದೆ ಮತ್ತು ಹೊಸ ನಾಟಕಕಾರರನ್ನು ಪರಿಚಯಿಸಬೇಕಿದೆ. ಈ ನಿಟ್ಟಿನಲ್ಲಿ ರಂಗಾಯಣದಿಂದ ನಾಟಕ ರಚನಾ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಪೆÇೀಷಕರು ಮಕ್ಕಳಿಗೆ ರಂಗಭೂಮಿಯ ಕುರಿತು ಆಸಕ್ತಿ ಮೂಡಿಸಬೇಕಿದೆ. ಶಾಲಾ-ಕಾಲೇಜುಗಳಲ್ಲಿ ನಾಟಕಕಾರರನ್ನು ಕರೆಯಿಸಿ ನಾಟಕ ಪ್ರದರ್ಶನ, ನಾಟಕ ಕುರಿತು ಸಂವಾದ ಕಾರ್ಯಕ್ರಮ ಆಯೋಜಿಸುವಂತೆ ಕ್ರಮ ವಹಿಸಲಾಗುವುದು ಎಂದರು.

ಈ ಭಾಗದ ಬಯಲಾಟ, ದೊಡ್ಡಾಟ ಮತ್ತು ತೊಗಲು ಗೊಂಬೆಯಾಟ ರಂಗ ಕಲೆಯನ್ನು ಉಳಿಸುವ ಮತ್ತು ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ಕಲೆ ಕುರಿತು ತರಬೇತಿ ನೀಡಲು, ಕಲೆ ಉಳಿಸಲು ಒಂದು ವಾರದ ಶಿಬಿರ ಆಯೋಜಿಸಲಾಗುವುದು. ಇದರಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರು ಸಹ ಭಾಗವಹಿಸಲು ಒಲವು ತೋರಿಸುತ್ತಿದ್ದು, ಅವರಿಗೂ ಸಹ ಅವಕಾಶ ಕಲ್ಪಿಸಬೇಕಿದೆ ಎಂದರು.

ಗಡಿ ಭಾಗದ ಮರಾಠಿ, ತೆಲುಗು ಭಾಷೆ ರಂಗಭೂಮಿಯೊಂದಿಗೆ ಹೊಂದಿಕೊಂಡು ನಾಟಕ ಶಿಬಿರ ಹಮ್ಮಿಕೊಳ್ಳಲಾಗುವುದು. ಇದರಿಂದ ಅಲ್ಲಿನ ನಾಟಕ ಶೈಲಿ, ಆಯಾಮಗಳನ್ನು ಪರಿಚಯಿಸಿಕೊಳ್ಳಬೇಕಿದೆ. ಈ ಕುರಿತು ಗಡಿ ಅಭಿವೃದ್ಧಿ ಪ್ರಾಧಿಕಾರದ ಜೊತೆ ಚರ್ಚಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ರಂಗಭೂಮಿಯಲ್ಲಿ ಪ್ರಸ್ತುತದಲ್ಲಿನ ವಾಸ್ತವತೆ, ಬೆಳವಣಿಗೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಬಳ್ಳಾರಿಯ ರಂಗಕಲಾವಿದರೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ರಂಗಕಲಾವಿದರಿಂದ ಸಲಹೆ ಪಡೆದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ರಂಗಭೂಮಿಯ ಹಿರಿಯ ಕಲಾವಿದರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande