ಜಲ ಒಪ್ಪಂದ ಸ್ಥಗಿತ : ಚೀನಾ ಮೊರೆ ಹೋದ ಪಾಕಿಸ್ತಾನ
ಇಸ್ಲಾಮಾಬಾದ್, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭಾರತವು ಪಾಕಿಸ್ತಾನ ವಿರುದ್ಧ ತೀವ್ರ ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಪಹಲ್ಗಾಮ್ ದಾಳಿಗೆ ಪ್ರತಿಯಾಗಿ, ಭಾರತ ಸಿಂಧೂ ನದಿ ಜಲ ಒಪ್ಪಂದವನ್ನು ಸ್ಥಗಿತಗೊಳಿಸಲು ನಿರ್ಧರಿ
Pak eam


ಇಸ್ಲಾಮಾಬಾದ್, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭಾರತವು ಪಾಕಿಸ್ತಾನ ವಿರುದ್ಧ ತೀವ್ರ ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಪಹಲ್ಗಾಮ್ ದಾಳಿಗೆ ಪ್ರತಿಯಾಗಿ, ಭಾರತ ಸಿಂಧೂ ನದಿ ಜಲ ಒಪ್ಪಂದವನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದು, ಇದರಿಂದ ಪಾಕಿಸ್ತಾನದಲ್ಲಿ ಭವಿಷ್ಯದ ನೀರಿನ ಬಿಕ್ಕಟ್ಟಿನ ಭೀತಿ ಎದುರಾಗಿದೆ.

ಪಾಕಿಸ್ತಾನ ಇದಕ್ಕೆ ಪ್ರತಿಕ್ರಿಯೆಯಾಗಿ ಚೀನಾ, ಬ್ರಿಟನ್ ಮತ್ತು ಇರಾನ್ ಸೇರಿದಂತೆ ವಿವಿಧ ರಾಷ್ಟ್ರಗಳ ನಾಯಕರಿಗೆ ಮನವಿ ಸಲ್ಲಿಸಿ ಭಾರತ ವಿರುದ್ಧ ಬೆಂಬಲ ಯಾಚಿದೆ. ಚೀನಾ ಪಾಕಿಸ್ತಾನವನ್ನು ಬೆಂಬಲಿಸುವುದಾಗಿ ಸ್ಪಷ್ಟಪಡಿಸಿದೆ. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ, ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ಭವಿಸಿದ ಪರಿಸ್ಥಿತಿಯನ್ನು ಗಮನಿಸುತ್ತಿರುವುದಾಗಿ ತಿಳಿಸಿದ್ದಾರೆ.

ಇದೇ ವೇಳೆ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಹಾಗೂ ಉಪ ಪ್ರಧಾನಿ ಇಶಾಕ್ ದಾರ್ ಅವರು ಬ್ರಿಟನ್ ಮತ್ತು ಇರಾನ್ ನಾಯಕರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande