ಬಳ್ಳಾರಿ, 28 ಏಪ್ರಿಲ್ (ಹಿ.ಸ.) :
ಆ್ಯಂಕರ್ : ನಗರದ ಅಂದ್ರಾಳ್‍ನ ಡಿ.ಸಿ ಕಾಲೋನಿಯ ಖಾಜಾ ಹುಸೇನ್(26) ಮಾ.31 ರಂದು ಕಾಣೆಯಾಗಿದ್ದು, ಈ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಚಹರೆ ಗುರುತು:
ಅಂದಾಜು 5.2 ಅಡಿ ಎತ್ತರ, ದುಂಡು ಮುಖ, ಬಿಳಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಎಡಗಾಲಿಗೆ ಪೊಲೀಯೊ ಆಗಿರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್