ಕೇಂದ್ರ ಸರ್ಕಾರ ಭಾರತೀಯರನ್ನು ಸುಳ್ಳಿನ ಪ್ರವಾಹದಲ್ಲಿ ಮುಳುಗಿಸಿದೆ : ಸಿದ್ದರಾಮಯ್ಯ
ಬೆಳಗಾವಿ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಖಿಲ ಭಾರತ ಕಾಂಗ್ರೆಸ್ ಪಕ್ಷದ ವತಿಯಿಂದ ಬೆಳಗಾವಿಯಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಪ್ರತಿಭಟನೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರದ ವಿರುದ್ದ ತೀವ್ರ ವಾಗ್
Cm


ಬೆಳಗಾವಿ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಅಖಿಲ ಭಾರತ ಕಾಂಗ್ರೆಸ್ ಪಕ್ಷದ ವತಿಯಿಂದ ಬೆಳಗಾವಿಯಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಪ್ರತಿಭಟನೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತ, ಭಾರತೀಯರ ಬದುಕನ್ನು ಬೆಲೆ ಏರಿಕೆಯಲ್ಲಿ ಬೇಯಿಸುತ್ತ, ಭಾರತೀಯ ಸಮಾಜವನ್ನು ಛಿದ್ರಗೊಳಿಸುತ್ತ, ಬಿರುಕು ಮೂಡಿಸುತ್ತ ಜನದ್ರೋಹಿಯಾಗಿ ವರ್ತಿಸುತ್ತಿರುವುದು ಬಿಟ್ಟರೆ ಬೇರೆ ಏನು ಮಾಡಿದ್ದೀರಿ ತೋರಿಸಿ ಎಂದು ಸವಾಲು ಹಾಕಿದರು.

ಭಾರತೀಯರು ಬ್ರಿಟೀಷರ ವಿರುದ್ಧ ಪ್ರಾಣತ್ಯಾಗ ಮಾಡಿ ಹೋರಾಡುತ್ತಿದ್ದಾಗ ನೀವು ಸಂಘ ಪರಿವಾರದವರು ಏನು ಕಡೆದು ಕಟ್ಟೆ ಹಾಕಿದಿರಿ? ಸ್ವಾತಂತ್ರ್ಯ ಹೋರಾಟಕ್ಕೆ ಏಕೆ ಬರಲಿಲ್ಲ ? ಏನ್ ಮಾಡುತ್ತಿದ್ದರಿ ಆಗ ಎಂದು ಪ್ರಶ್ನಿಸಿದರು.

ಮೊನ್ನೆ ಕಾಶ್ಮೀರದಲ್ಲಿ ಅಮಾಯಕ ಭಾರತೀಯರನ್ನು, ಕರ್ನಾಟಕದ ಮೂವರು ಅಮಾಯಕರನ್ನು ರಾಜಾರೋಷವಾಗಿ ಬಂದು ಅಮಾನುಷವಾಗಿ ಹತ್ಯೆ ಮಾಡಿ ಹೋದರಲ್ಲಾ ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ ಅಲ್ಲವಾ ? ಭಾರತೀಯರಿಗೆ ರಕ್ಷಣೆ ಕೊಡುವುದರಲ್ಲಿ ವಿಫಲ ಆಗಿರುವುದನ್ನು ನಾವು ಭಾರತೀಯರು ಪ್ರಶ್ನಿಸಬಾರದಾ ? ಪ್ರಶ್ನಿಸಿದರೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸುತ್ತೀರಾ ಎಂದು ಪ್ರಶ್ನಿಸಿದರು.

ಕಚ್ಛಾ ತೈಲ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್, ಡೀಸೆಲ್ ಬೆಲೆ ಮಾತ್ರ ನಿರಂತರವಾಗಿ ಏರಿಕೆ ಮಾಡುತ್ತಲೇ ಇರುವುದು ಭಾರತೀಯರಿಗೆ, ಬಿಜೆಪಿ ಬಗೆಯುತ್ತಿರುವ ಮಹಾ ದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನಿರಂತರವಾಗಿ ಭಾರತೀಯರನ್ನು ಸುಳ್ಳುಗಳ ಸರಮಾಲೆಯಲ್ಲಿ ಮುಳುಗಿಸಿ, ಸಮಾಜವನ್ನು ಬಿರುಕು ಮೂಡಿಸಿ ಕಾಲ ಕಳೆಯುತ್ತಿದೆ. ನಿಮಗೆ ತಕ್ಕ ಉತ್ತರ ಕೊಡುವ ಶಕ್ತಿ ನಮಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande