ಬೆಂಗಳೂರು, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ಸರ್ಕಾರದ ದುರಾಡಳಿತ, ಜನಸಾಮಾನ್ಯರನ್ನು ಶೋಷಿಸುವ ಪರಿಯಲ್ಲಿ ನಿರಂತರ ಬೆಲೆ ಏರಿಕೆಯ ವಿರುದ್ಧ ‘ಬಿಜೆಪಿ-ಕರ್ನಾಟಕ’ಸಂಘಟಿಸಿದ್ದ ‘24 ಗಂಟೆಗಳ ಅಹೋ ರಾತ್ರಿ ಧರಣಿ ಸತ್ಯಾಗ್ರಹ’ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ ಕರ್ನಾಟಕ ಹಮ್ಮಿಕೊಂಡಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ,ಬೆಲೆ ಏರಿಕೆ ಹಾಗೂ ಸಂವಿಧಾನ ಆಶಯಕ್ಕೆ ವಿರುದ್ಧವಾಗಿ ಮುಸ್ಲಿಂ ಮೀಸಲಾತಿ, ಪರಿಶಿಷ್ಟ ಹಾಗೂ ಹಿಂದುಳಿದ ಸಮುದಾಯಗಳ ಕಲ್ಯಾಣ ಕಾರ್ಯಕ್ರಮಗಳಿಗೆ ಹಿನ್ನಡೆ ಉಂಟಾಗಿರುವುದರ ವಿರುದ್ಧ ಏಪ್ರಿಲ್ 7 ರಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಜನಾಕ್ರೋಶ ಹೋರಾಟಕ್ಕೆ ಇದೇ ರೀತಿಯ ಸಹಕಾರವನ್ನು ಸರ್ವರಿಂದಲೂ ನಿರೀಕ್ಷಿಸುವುದಾಗಿ ವಿಜಯೇಂದ್ರ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa